---Advertisement---

ಚಾರ್ಮಾಡಿ ಹೆದ್ದಾರಿಯಲ್ಲಿ ಕಾರು ಅಪಘಾತ : ಡಿವೈಡರ್‌ಗೆ ಡಿಕ್ಕಿ ಹೊಡೆದು ವಾಹನ ಜಖಂ

drusti news logo
On: June 25, 2026
ಚಾರ್ಮಾಡಿ ಹೆದ್ದಾರಿಯ ಮದ್ದಡ್ಕ ಸಮೀಪ ಡಿವೈಡರ್ ಹಾಗೂ ಸುರಕ್ಷತಾ ತಡೆಬೇಲಿಗೆ ಢಿಕ್ಕಿ ಹೊಡೆದು ಜಖಂಗೊಂಡ ಕಾರು
---Advertisement---

ಕುವೆಟ್ಟು : ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಮದ್ದಡ್ಕ ಸಮೀಪದ ನೆರಳಕಟ್ಟೆ ಪ್ರದೇಶದಲ್ಲಿ ಜೂನ್ 8ರಂದು ಕಾರೊಂದು ಅಪಘಾತಕ್ಕೀಡಾದ ಘಟನೆ ವರದಿಯಾಗಿದೆ. ಧರ್ಮಸ್ಥಳದತ್ತ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ.

ಲಭ್ಯವಾದ ಮಾಹಿತಿಯ ಪ್ರಕಾರ, ಸಂಚರಿಸುತ್ತಿದ್ದ ಕಾರು ಏಕಾಏಕಿ ವಿರುದ್ಧ ದಿಕ್ಕಿನತ್ತ ಚಲಿಸಿ ಮೊದಲು ಡಿವೈಡರ್‌ಗೆ ಅಪ್ಪಳಿಸಿದೆ. ಬಳಿಕ ರಸ್ತೆ ಬದಿಯಲ್ಲಿ ಅಳವಡಿಸಲಾಗಿದ್ದ ಕಬ್ಬಿಣದ ಸುರಕ್ಷತಾ ತಡೆಬೇಲಿಗೂ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ವಾಹನದ ಟೈರ್ ಸ್ಫೋಟಗೊಂಡಿದ್ದು, ಕಾರು ಸ್ಥಳದಲ್ಲೇ ನಿಂತು ಹೋಗಿದೆ.

ಘಟನೆಯ ವೇಳೆ ಕಾರಿನಲ್ಲಿ ಹಲವು ಸಹಪ್ರಯಾಣಿಕರು ಇದ್ದರು. ಆದರೆ ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ವಾಹನದಲ್ಲಿದ್ದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಅಪಘಾತದ ಪರಿಣಾಮ ಕಾರಿನ ಮುಂಭಾಗಕ್ಕೆ ತೀವ್ರ ಹಾನಿಯಾಗಿದ್ದು, ವಾಹನ ಸಂಪೂರ್ಣ ಜಖಂಗೊಂಡಿದೆ. ಯಾವುದೇ ಪ್ರಾಣಾಪಾಯ ಸಂಭವಿಸದಿರುವುದು ನೆಮ್ಮದಿಯ ಸಂಗತಿಯಾಗಿದೆ.

ಮತ್ತಷ್ಟು ಓದಿ

ಮಡಂತ್ಯಾರು ಸಮೀಪ ಭೀಕರ ರಸ್ತೆ ಅಪಘಾತ : ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಸೇರಿ ಇಬ್ಬರ ದುರ್ಮರಣ

ಸಂಪಾಜೆ ಚೆಕ್‌ಪೋಸ್ಟ್ ಬಳಿ ಐರಾವತ ಬಸ್ – ಕಿಯಾ ಕಾರು ಮುಖಾಮುಖಿ ಡಿಕ್ಕಿ.

drusti news logo

drustinews

Drusti News delivers timely, accurate, and reliable Kannada news covering local, state, national, and global events

Join WhatsApp

Join Now

Join Instagram

Join Now