ಮಡಿಕೇರಿ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸುಮಾರು 40 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಘಟನೆ ಮಡಿಕೇರಿ–ಮೂರ್ನಾಡು ರಸ್ತೆಯಲ್ಲಿ ಸಂಭವಿಸಿದೆ.
ಮೂರ್ನಾಡು ಕಡೆಯಿಂದ ಮಡಿಕೇರಿ ಕಡೆಗೆ ಸಂಚರಿಸುತ್ತಿದ್ದ ವೇಳೆ ಕಾರು ಏಕಾಏಕಿ ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಕೆಳಗಿನ ಕಂದಕಕ್ಕೆ ಉರುಳಿದೆ. ಅಪಘಾತದ ತೀವ್ರತೆಗೆ ವಾಹನಕ್ಕೆ ಭಾರೀ ಪ್ರಮಾಣದ ಹಾನಿಯಾಗಿದೆ.
ಘಟನೆಯ ವೇಳೆ ಕಾರಿನಲ್ಲಿದ್ದ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಸುರಕ್ಷಿತರಾಗಿದ್ದಾರೆ ಎಂದು ತಿಳಿದುಬಂದಿದೆ.
ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಮಡಿಕೇರಿ ನಗರ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿ, ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಿದ್ದಾರೆ.
ಈ ಘಟನೆ ಕೆಲಕಾಲ ರಸ್ತೆ ಬಳಿಯ ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಕಾರು ಕಂದಕಕ್ಕೆ ಉರುಳಿದ ದೃಶ್ಯ ಸಿನಿಮೀಯ ಘಟನೆಯನ್ನು ನೆನಪಿಸುವಂತಿತ್ತು.
ಮತ್ತಷ್ಟು ಓದಿ :
ಗಡಿಯಾರ ಬಳಿ ಕಾರು ಅಪಘಾತ: ಹಾಸನ ಮೂಲದ ಚಾಲಕ ಸಾವು, ಮೂವರಿಗೆ ಗಾಯ
ಚಾರ್ಮಾಡಿ ಹೆದ್ದಾರಿಯಲ್ಲಿ ಕಾರು ಅಪಘಾತ : ಡಿವೈಡರ್‌ಗೆ ಡಿಕ್ಕಿ ಹೊಡೆದು ವಾಹನ ಜಖಂ










