---Advertisement---

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವು

drusti news logo
On: June 14, 2026
ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಡಿಕ್ಕಿಯಿಂದ ಮೃತಪಟ್ಟ ವ್ಯಕ್ತಿಯ ಘಟನೆ
---Advertisement---

ಬಂಟ್ವಾಳ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಸಮೀಪದ ನೆಹರೂ ನಗರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರನ್ನು ಸೈಯದ್ ರಿಯಾಜ್ ಎಂದು ಗುರುತಿಸಲಾಗಿದೆ. ಜೂನ್ 11ರ ರಾತ್ರಿ ಅವರು ಹೆದ್ದಾರಿ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಮೇಲೆ ಬಿದ್ದಿದ್ದು, ಗಂಭೀರ ಗಾಯಗಳಾಗಿದ್ದವು ಎಂದು ತಿಳಿದುಬಂದಿದೆ.

ಅಪಘಾತದ ತಕ್ಷಣ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ನಂತರ ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಆದರೆ ವೈದ್ಯಕೀಯ ಚಿಕಿತ್ಸೆ ಮುಂದುವರಿದಿದ್ದರೂ ಆರೋಗ್ಯದಲ್ಲಿ ಸುಧಾರಣೆ ಕಾಣದ ಹಿನ್ನೆಲೆಯಲ್ಲಿ ಜೂನ್ 12ರಂದು ಅವರು ಕೊನೆಯುಸಿರೆಳೆದಿದ್ದಾರೆ.

ಈ ಸಂಬಂಧ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ಕುರಿತು ತನಿಖೆ ಮುಂದುವರಿದಿದೆ.

ಮತ್ತಷ್ಟು ಓದಿ :

ಪಾಪೆತ್ತಡ್ಕ ಜೀತೊ ಸ್ಕೂಟರ್ ಅಪಘಾತ : ಸವಾರ ಆಸ್ಪತ್ರೆಗೆ ದಾಖಲು

drusti news logo

drustinews

Drusti News delivers timely, accurate, and reliable Kannada news covering local, state, national, and global events

Join WhatsApp

Join Now

Join Instagram

Join Now

Leave a Comment