ಪುತ್ತೂರು : ಶ್ರೀರಾಮಚಂದ್ರರ ಕುರಿತು ನೀಡಲಾಗಿದೆ ಎನ್ನಲಾದ ಅವಹೇಳನಕಾರಿ ಹೇಳಿಕೆಗಳ ಹಿನ್ನೆಲೆದಲ್ಲಿ ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಸರ್ಕಾರ ತಕ್ಷಣವೇ ಸುಮೋಟೋ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ ಒತ್ತಾಯಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅಶೋಕ್ ರೈ, ಪ್ರೊ. ಭಗವಾನ್ ಅವರ ಇತ್ತೀಚಿನ ಹೇಳಿಕೆಗಳು ಹಿಂದೂ ಧರ್ಮದ ಭಾವನೆಗಳಿಗೆ ಧಕ್ಕೆ ಉಂಟುಮಾಡುವಂತಿವೆ ಎಂದು ಅಭಿಪ್ರಾಯಪಟ್ಟರು. ಧಾರ್ಮಿಕ ನಂಬಿಕೆಗಳು ಪ್ರತಿಯೊಬ್ಬರ ವೈಯಕ್ತಿಕ ವಿಚಾರವಾಗಿದ್ದು, ಯಾವುದೇ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡುವ ರೀತಿಯ ಹೇಳಿಕೆಗಳನ್ನು ನೀಡುವುದು ಸೂಕ್ತವಲ್ಲ ಎಂದು ಹೇಳಿದರು.
ಭಗವಾನ್ ಅವರು ಯಾವ ಧರ್ಮವನ್ನು ನಂಬುತ್ತಾರೆ ಎಂಬುದು ನಮಗೆ ತಿಳಿದಿಲ್ಲ. ಆದರೆ ಹಿಂದೂ ಧರ್ಮದ ಬಗ್ಗೆ ನಿರಂತರವಾಗಿ ವಿವಾದಾತ್ಮಕ ಹಾಗೂ ಭಾವನೆಗಳನ್ನು ಕೆರಳಿಸುವ ರೀತಿಯ ಹೇಳಿಕೆಗಳನ್ನು ನೀಡುತ್ತಿರುವುದು ಸರಿಯಲ್ಲ. ಇಂತಹ ಹೇಳಿಕೆಗಳಿಂದ ಸಮಾಜದಲ್ಲಿ ಅಸಮಾಧಾನ ಮತ್ತು ಉದ್ವಿಗ್ನತೆ ಉಂಟಾಗುವ ಸಾಧ್ಯತೆಗಳಿವೆ ಎಂದು ಅಶೋಕ್ ರೈ ಆತಂಕ ವ್ಯಕ್ತಪಡಿಸಿದರು.
ಸರ್ಕಾರದಿಂದ ಕಠಿಣ ಕ್ರಮಕ್ಕೆ ಒತ್ತಾಯ
ಪ್ರೊ. ಭಗವಾನ್ ವಿರುದ್ಧ ಕೂಡಲೇ ಪ್ರಕರಣ ದಾಖಲಿಸಿ, ಅಗತ್ಯವಿದ್ದಲ್ಲಿ ಬಂಧನ ಸೇರಿದಂತೆ ಕಾನೂನುಬದ್ಧ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ರಾಜ್ಯ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ಇದೇ ವೇಳೆ, ಈ ವಿಚಾರವಾಗಿ ಯಾವುದೇ ಹಿಂದೂ ಸಂಘಟನೆಗಳು ತಮ್ಮನ್ನು ಸಂಪರ್ಕಿಸಿ ಮನವಿ ಸಲ್ಲಿಸಿಲ್ಲ ಎಂದು ಸ್ಪಷ್ಟಪಡಿಸಿದ ಅಶೋಕ್ ರೈ, ಇದು ಕೇವಲ ಸಂಘಟನೆಗಳ ಬೇಡಿಕೆಯ ವಿಚಾರವಲ್ಲ, ಧಾರ್ಮಿಕ ನಂಬಿಕೆ ಮತ್ತು ಭಾವನೆಗಳಿಗೆ ಸಂಬಂಧಿಸಿದ ವಿಷಯವಾಗಿದೆ ಎಂದು ಹೇಳಿದರು.
ಗೃಹ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ
ಧರ್ಮವು ಪ್ರತಿಯೊಬ್ಬರ ನಂಬಿಕೆ ಮತ್ತು ಬದುಕಿನ ಅವಿಭಾಜ್ಯ ಅಂಗವಾಗಿದೆ. ಆದ್ದರಿಂದ ಈ ವಿಷಯವನ್ನು ರಾಜ್ಯದ ಗೃಹ ಸಚಿವರು ಹಾಗೂ ಮುಖ್ಯಮಂತ್ರಿಗಳ ಗಮನಕ್ಕೆ ತಂದು, ಪ್ರೊ. ಭಗವಾನ್ ವಿರುದ್ಧ ಸುಮೋಟೋ ಕೇಸ್ ದಾಖಲಿಸುವಂತೆ ಒತ್ತಾಯಿಸುವುದಾಗಿ ಅಶೋಕ್ ರೈ ತಿಳಿಸಿದರು.
ಈ ಹೇಳಿಕೆಯು ರಾಜ್ಯ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಸರ್ಕಾರದ ಪ್ರತಿಕ್ರಿಯೆ ಏನಿರಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಇನ್ನಷ್ಟು ಓದಲು :
ಡಿ.ಕೆ. ಶಿವಕುಮಾರ್ ಮೋದಿ ಭೇಟಿ : ಕರ್ನಾಟಕ ಯೋಜನೆಗಳ ಚರ್ಚೆ
ಉಡುಪಿ ಶಾಸಕ ಯಶ್‌ಪಾಲ್ ಸುವರ್ಣಗೆ ಹೈಕೋರ್ಟ್‌ನಿಂದ ಮಹತ್ವದ ರಿಲೀಫ್
RSS ವಿರುದ್ಧ ಮತ್ತೆ ಗುಡುಗಿದ ಪ್ರಿಯಾಂಕ್ ಖರ್ಗೆ; ಎಕ್ಸ್ ಪೋಸ್ಟ್‌ಗೆ ರಾಜಕೀಯ ವಲಯದಲ್ಲಿ ಸಂಚಲನ
MLC ಟಿಕೆಟ್ ಹಂಚಿಕೆಯಲ್ಲಿ ಬಿಜೆಪಿ ಶಾಕ್ ; ಸದಾನಂದ ಗೌಡ, ಸುಮಲತಾ ವಂಚಿತರು!
















2 thoughts on “ಶ್ರೀರಾಮಚಂದ್ರರ ಕುರಿತು ವಿವಾದಾತ್ಮಕ ಹೇಳಿಕೆ : ಪ್ರೊ. ಭಗವಾನ್ ವಿರುದ್ಧ ಸುಮೋಟೋ ಕೇಸ್ ದಾಖಲಿಸಲು ಅಶೋಕ್ ರೈ ಆಗ್ರಹ”