---Advertisement---

ಚಾರ್ಮಾಡಿ ಘಾಟಿಯಲ್ಲಿ ಎಸ್‌ಐಟಿ ಅಧಿಕಾರಿಗಳ ಕಾರು ಪಲ್ಟಿ; ಅಪಾಯದಿಂದ ಪಾರಾದ ನಾಲ್ವರು

drusti news logo
On: June 25, 2026
ಚಾರ್ಮಾಡಿ ಘಾಟಿಯಲ್ಲಿ ಅಪಘಾತಕ್ಕೀಡಾದ ಎಸ್‌ಐಟಿ ಅಧಿಕಾರಿಗಳ ಪೊಲೀಸ್ ವಾಹನ
---Advertisement---

ಬೆಳ್ತಂಗಡಿ, ಜೂ.16: ಬುರುಡೆ ಪ್ರಕರಣದ ತನಿಖೆಗೆ ಸಂಬಂಧಿಸಿದ ಕರ್ತವ್ಯ ನಿರ್ವಹಣೆಯಲ್ಲಿದ್ದ ವಿಶೇಷ ತನಿಖಾ ದಳದ (ಎಸ್‌ಐಟಿ) ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಪೊಲೀಸ್ ಇಲಾಖೆಯ ವಾಹನ ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ಅಪಘಾತಕ್ಕೀಡಾಗಿದೆ. ವಾಹನ ರಸ್ತೆ ಬದಿಯಲ್ಲಿ ಪಲ್ಟಿಯಾದರೂ ಅದರಲ್ಲಿದ್ದ ನಾಲ್ವರು ಸುರಕ್ಷಿತವಾಗಿ ಪಾರಾಗಿದ್ದಾರೆ.

ಮಾಹಿತಿಯ ಪ್ರಕಾರ, ಎಸ್‌ಐಟಿ ಎಸ್ಪಿ ಸಿ.ಎ. ಸೈಮನ್, ಇನ್‌ಸ್ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಹಾಗೂ ಚಾಲಕ ಪೊಲೀಸ್ ಇಲಾಖೆಯ ಇನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಹಾಗೂ ಎಸ್‌ಐಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿ ಮಾಡಿ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದ ಹೈಕೋರ್ಟ್ ರಿಟ್ ಅರ್ಜಿಯ ವಿಚಾರವಾಗಿ ಚರ್ಚಿಸಲು ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಚಾರ್ಮಾಡಿ ಘಾಟಿಯ ತಿರುವು ಪ್ರದೇಶದಲ್ಲಿ ಸಾಗುತ್ತಿದ್ದಾಗ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಯ ನಡುವೆಯೂ ಕಾರಿನಲ್ಲಿದ್ದ ಯಾರಿಗೂ ಗಾಯಗಳಾಗಿಲ್ಲ ಎಂಬುದು ಗಮನಾರ್ಹ ಸಂಗತಿ.

ಅಪಘಾತದಿಂದ ಪೊಲೀಸ್ ಇಲಾಖೆಯ ವಾಹನಕ್ಕೆ ಹಾನಿಯಾಗಿದ್ದು, ಬಳಿಕ ಅಧಿಕಾರಿಗಳು ಸುರಕ್ಷಿತವಾಗಿ ಸ್ಥಳದಿಂದ ಹೊರಬಂದಿದ್ದಾರೆ. ಘಟನೆಯಿಂದ ಕೆಲಕಾಲ ಸ್ಥಳೀಯವಾಗಿ ಸಂಚಾರದಲ್ಲಿ ಅಡಚಣೆ ಉಂಟಾದ ಮಾಹಿತಿ ಲಭ್ಯವಾಗಿದೆ.

ಅಪಘಾತದ ಬಳಿಕ ಅಧಿಕಾರಿಗಳು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ತೆರಳಿ ಘಟನೆಯ ಕುರಿತು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಅಗತ್ಯ ಕಾನೂನು ಪ್ರಕ್ರಿಯೆ ಆರಂಭಗೊಂಡಿದ್ದು, ಪ್ರಕರಣ ದಾಖಲಿಸುವ ಕಾರ್ಯ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಓದಿ :

ಧರ್ಮಸ್ಥಳದ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ

ಚಾರ್ಮಾಡಿ ಹೆದ್ದಾರಿಯಲ್ಲಿ ಕಾರು ಅಪಘಾತ : ಡಿವೈಡರ್‌ಗೆ ಡಿಕ್ಕಿ ಹೊಡೆದು ವಾಹನ ಜಖಂ

ಧರ್ಮಸ್ಥಳದಲ್ಲಿ ಭಕ್ತೆಯನ್ನೇ ಟಾರ್ಗೆಟ್ ಮಾಡಿದ ಖತರ್ನಾಕ್ ಗ್ಯಾಂಗ್?

drusti news logo

drustinews

Drusti News delivers timely, accurate, and reliable Kannada news covering local, state, national, and global events

Join WhatsApp

Join Now

Join Instagram

Join Now