ಮಂಗಳೂರು : ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಠಾಣಾ ಪ್ರದೇಶಗಳಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ ಐದು ಮಂದಿಯನ್ನು ಪೊಲೀಸರು ಬಂಧಿಸಿ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯ ವರದಿಯಲ್ಲಿ ಆರೋಪಿಗಳು ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ.
ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನುಮಾನಾಸ್ಪದ ಚಟುವಟಿಕೆಯ ಹಿನ್ನೆಲೆಯಲ್ಲಿ ಮೂಡುಶೆಡ್ಡೆ ಶಿವನಗರ ನಿವಾಸಿ ಆಕಾಶ್ (30) ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಬಳಿಕ ನಡೆಸಿದ ವೈದ್ಯಕೀಯ ಪರೀಕ್ಷೆಯಲ್ಲಿ ಅವರು ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿರುವುದಾಗಿ ತಿಳಿದುಬಂದಿದೆ.
ಇನ್ನೊಂದೆಡೆ, ಕೊಣಾಜೆ ಠಾಣೆ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಸೈಗೋಳಿ ಮೈದಾನದ ಬಳಿ ಕಂಡುಬಂದ ಸುಮಂತ್ ಶೆಟ್ಟಿ (27), ದೇರಳಕಟ್ಟೆಯ ಗ್ರೀನ್ ಗ್ರೌಂಡ್ ಪ್ರದೇಶದಲ್ಲಿ ಪತ್ತೆಯಾದ ವಿಕ್ರಮ್ (23) ಹಾಗೂ ಮುಡಿಪು ಮೈದಾನದ ಸಮೀಪ ಸಿಕ್ಕಿಬಿದ್ದ ಕೆ.ಎಂ. ಬಿಲಾಲ್ (30) ಅವರ ವೈದ್ಯಕೀಯ ಪರೀಕ್ಷಾ ವರದಿಯಲ್ಲೂ ಮಾದಕ ವಸ್ತು ಸೇವನೆ ದೃಢಪಟ್ಟಿದೆ.
ಪಣಂಬೂರು ಠಾಣೆ ವ್ಯಾಪ್ತಿಯ ಜೋಕಟ್ಟೆ ರೈಲ್ವೆ ಹಳಿಗಳ ಸಮೀಪ ಮೊಹಮ್ಮದ್ ಸಾದಿಕ್ (37) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ಆತ ಮಾದಕ ವಸ್ತು ಸೇವಿಸಿರುವುದಾಗಿ ಒಪ್ಪಿಕೊಂಡಿದ್ದು, ವೈದ್ಯಕೀಯ ಪರೀಕ್ಷೆಯೂ ಅದನ್ನು ದೃಢಪಡಿಸಿದೆ.
ಈ ಎಲ್ಲ ಪ್ರಕರಣಗಳಲ್ಲಿ ಸಂಬಂಧಿತ ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಾದಕ ವಸ್ತು ಬಳಕೆ ವಿರುದ್ಧ ನಗರ ಪೊಲೀಸರು ನಿರಂತರ ಕಾರ್ಯಾಚರಣೆ ಮುಂದುವರಿಸಿದ್ದು, ಇತ್ತೀಚಿನ ಕ್ರಮದಲ್ಲಿ ಐವರು ಆರೋಪಿಗಳು ಕಾನೂನು ಬಲೆಗೆ ಬಿದ್ದಿದ್ದಾರೆ. ಪ್ರಕರಣಗಳ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಮತ್ತಷ್ಟು ಓದಿ :
ಉಪ್ಪಿನಂಗಡಿಯಲ್ಲಿ ಮಾದಕ ವಸ್ತು ಜಾಲಕ್ಕೆ ಪೊಲೀಸರ ಬಲೆ; 33 ಗ್ರಾಂ ಗಾಂಜಾ ಸಹಿತ ವ್ಯಕ್ತಿ ಬಂಧನ
11 ಕೋಟಿ ರೂ. ಹೈಡ್ರೋಪೋನಿಕ್ಸ್ ಗಾಂಜಾ ಜಪ್ತಿ: ‘ಮಿಸೆಸ್ ಕೇರಳ’ ಮಾಜಿ ಸ್ಪರ್ಧಿ ಬಂಧನ














1 thought on “ಮಂಗಳೂರು : ಮಾದಕ ವಸ್ತು ಸೇವನೆ ಪ್ರಕರಣದಲ್ಲಿ ಐವರು ಪೊಲೀಸರ ವಶಕ್ಕೆ”