ನವದೆಹಲಿ: ಕೇಂದ್ರ ಸಚಿವ ಸಂಪುಟ ಪುನಾರಚನೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳು ಜೋರಾಗಿರುವ ಸಂದರ್ಭದಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಭೇಟಿ ಹಲವು ರಾಜಕೀಯ ಊಹಾಪೋಹಗಳಿಗೆ ಮತ್ತಷ್ಟು ವೇಗ ನೀಡಿದೆ.
ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ರಾಷ್ಟ್ರಪತಿ ಮುರ್ಮು ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದರು. ಆ ಭೇಟಿಯಾದ ಕೇವಲ ಎರಡು ದಿನಗಳಲ್ಲೇ ಅಮಿತ್ ಶಾ ರಾಷ್ಟ್ರಪತಿ ಭವನಕ್ಕೆ ತೆರಳಿರುವುದು ರಾಜಕೀಯ ವಲಯದಲ್ಲಿ ವಿಶೇಷ ಗಮನ ಸೆಳೆದಿದೆ. ಆದರೆ, ಈ ಭೇಟಿಯ ಉದ್ದೇಶದ ಕುರಿತು ಯಾವುದೇ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ.
ಇನ್ನೊಂದೆಡೆ, ಜೂನ್ 21ರಂದು ರಾಜ್ಯಸಭಾ ಸದಸ್ಯತ್ವದ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಜಾರ್ಜ್ ಕುರಿಯನ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇದೇ ಅವಧಿಯಲ್ಲಿ ಬಿಜೆಪಿ ಪಕ್ಷವು ಕೆಲ ಕೇಂದ್ರ ಸಚಿವರಿಗೆ ಹೊಸ ಸಂಘಟನಾತ್ಮಕ ಜವಾಬ್ದಾರಿಗಳನ್ನು ವಹಿಸಿದೆ.
ಈ ಬೆಳವಣಿಗೆಗಳ ಸರಣಿ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸಂಪುಟದಲ್ಲಿ ಶೀಘ್ರದಲ್ಲೇ ಪುನಾರಚನೆ ನಡೆಯುವ ಸಾಧ್ಯತೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳು ಮತ್ತಷ್ಟು ಬಲ ಪಡೆದಿವೆ. ಆದರೆ, ಈ ಕುರಿತು ಕೇಂದ್ರ ಸರ್ಕಾರ ಅಥವಾ ಬಿಜೆಪಿ ನಾಯಕರಿಂದ ಯಾವುದೇ ಅಧಿಕೃತ ಘೋಷಣೆ ಇನ್ನೂ ಪ್ರಕಟವಾಗಿಲ್ಲ.
ಮತ್ತಷ್ಟು ಓದಿ :
“ರೈತರನ್ನು ಬೀದಿಗೆ ತಳ್ಳುವ ಹುನ್ನಾರ” : ಬಿಡದಿ ಟೌನ್ಶಿಪ್ ವಿರುದ್ಧ ಆರ್. ಅಶೋಕ್ ಕಿಡಿ
“ನಿಮ್ಮ ಚಲನವಲನದ ಮೇಲೆ ನಮ್ಮ ಕಣ್ಣಿದೆ” – CLP ಸಭೆಯಲ್ಲಿ ಡಿಕೆಶಿ ಹೇಳಿದ್ದೇನು?
















1 thought on “ಅಮಿತ್ ಶಾ ರಾಷ್ಟ್ರಪತಿ ಭೇಟಿ ಬಳಿಕ ಸಂಪುಟ ಪುನಾರಚನೆ ಚರ್ಚೆ ತೀವ್ರ; ರಾಜಕೀಯ ವಲಯದಲ್ಲಿ ಹೆಚ್ಚಿದ ಕುತೂಹಲ”