---Advertisement---

ಮಂಗಳೂರು ಬಾವುಟಗುಡ್ಡೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿ ಬಿದ್ದು ಆತಂಕ; ಚಾಲಕ ಸುರಕ್ಷಿತ

drusti news logo
On: July 20, 2026
ಮಂಗಳೂರಿನ ಬಾವುಟಗುಡ್ಡೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿ ಬಿದ್ದ ದೃಶ್ಯ
---Advertisement---

ಮಂಗಳೂರು: ನಗರದಲ್ಲಿ ಸುರಿದ ಭಾರಿ ಮಳೆಯ ನಡುವೆ ಸೋಮವಾರ (ಜು.20) ಮಧ್ಯಾಹ್ನ ಬಾವುಟಗುಡ್ಡೆಯ ಅಲೋಶಿಯಸ್ ಕಾಲೇಜು ಸಮೀಪದ ಒಳರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿ ಬಿದ್ದ ಘಟನೆ ಸಂಭವಿಸಿದೆ. ಘಟನೆಯಲ್ಲಿ ಕಾರು ಹಾನಿಗೊಳಗಾದರೂ, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮರ ಉರುಳಿದ ಪರಿಣಾಮ ಅದರ ಕೊಂಬೆಗಳು ಸಮೀಪದಲ್ಲಿದ್ದ ಕ್ಯಾಂಟೀನ್ ಮೇಲೂ ಬಿದ್ದಿದ್ದು, ಕ್ಯಾಂಟೀನ್ ಹಾಗೂ ಕಾರಿಗೆ ಹಾನಿಯಾಗಿದೆ. ಘಟನೆ ನಡೆದ ವೇಳೆ ಕಾರಿನಲ್ಲಿ ಚಾಲಕ ಮಾತ್ರ ಇದ್ದರು. ಮರವು ಕಾರಿನ ಹಿಂಭಾಗದ ಮೇಲೆ ಬಿದ್ದಿದ್ದರಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಪಾಂಡೇಶ್ವರ ಅಗ್ನಿಶಾಮಕ ದಳ ಹಾಗೂ ಎಸ್‌ಡಿಆರ್‌ಎಫ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮರವನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು. ಬಳಿಕ ಸಂಚಾರಕ್ಕೆ ಅಡ್ಡಿಯಾಗಿದ್ದ ಮರವನ್ನು ತೆರವುಗೊಳಿಸಲಾಯಿತು.

ಮೆಸ್ಕಾಂ ಹಾಗೂ ಪಾಲಿಕೆ ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸದಿರುವುದು ಸಮಾಧಾನದ ಸಂಗತಿಯಾಗಿದ್ದು, ಭಾರಿ ಮಳೆಯ ಹಿನ್ನೆಲೆ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.


ಮತ್ತಷ್ಟು ಓದಿ :

ಉಡುಪಿಯಲ್ಲಿ ಮಾದಕವಸ್ತು ಜಾಲಕ್ಕೆ ಪೊಲೀಸರ ದೊಡ್ಡ ಹೊಡೆತ: ಎಂ.ಡಿ.ಎಂ.ಎ, ಹೈಡ್ರೋ ಗಾಂಜಾ ಸಹಿತ ಮೂವರು ಬಂಧನ

ಬಂಟ್ವಾಳ ಲಾವಣ್ಯ ಹತ್ಯೆ ಪ್ರಕರಣ : ಆರೋಪಿ ಚೇತನ್‌ಗೆ ಪೊಲೀಸ್ ಭದ್ರತೆಯಲ್ಲಿ ಚಿಕಿತ್ಸೆ ಮುಂದುವರಿಕೆ

drusti news logo

drustinews

Drusti News delivers timely, accurate, and reliable Kannada news covering local, state, national, and global events

Join WhatsApp

Join Now

Join Instagram

Join Now

1 thought on “ಮಂಗಳೂರು ಬಾವುಟಗುಡ್ಡೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿ ಬಿದ್ದು ಆತಂಕ; ಚಾಲಕ ಸುರಕ್ಷಿತ”

Leave a Comment