---Advertisement---

ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಳಿತ: ಬಂಟ್ವಾಳದಲ್ಲಿ 15ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ನಿವಾಸಿಗಳ ಸ್ಥಳಾಂತರ

drusti news logo
On: August 3, 2026
ನೇತ್ರಾವತಿ ನದಿಯ ನೀರಿನ ಮಟ್ಟ ಏರಿಕೆ
---Advertisement---

ಬಂಟ್ವಾಳ: ಘಟ್ಟ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ ನೇತ್ರಾವತಿ ನದಿಯ ನೀರಿನ ಮಟ್ಟದಲ್ಲಿ ಏರಿಳಿತ ಮುಂದುವರಿದಿದೆ. ಭಾನುವಾರವೂ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ತಗ್ಗು ಪ್ರದೇಶಗಳ ಹಲವು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಮುನ್ನೆಚ್ಚರಿಕಾ ಕ್ರಮವಾಗಿ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಭಾನುವಾರ ಬೆಳಿಗ್ಗೆ ಬಂಟ್ವಾಳದಲ್ಲಿ ನೇತ್ರಾವತಿ ನದಿಯ ನೀರಿನ ಮಟ್ಟ 7.4 ಮೀಟರ್ ದಾಖಲಾಗಿತ್ತು. ಮಧ್ಯಾಹ್ನ ಸ್ವಲ್ಪ ಇಳಿಕೆಯಾಗಿದ್ದರೂ, ಸಂಜೆ ವೇಳೆಗೆ ಏಕಾಏಕಿ 8.6 ಮೀಟರ್‌ಗೆ ಏರಿಕೆಯಾಗಿ ಬಳಿಕ 8.5 ಮೀಟರ್ ಮಟ್ಟದಲ್ಲಿ ಹರಿಯುತ್ತಿತ್ತು.

ನೀರಿನ ಮಟ್ಟ ಏರಿದ ಪರಿಣಾಮ ಪಾಣೆಮಂಗಳೂರು, ಆಲಡ್ಕಪಡು ಸೇರಿದಂತೆ ನದಿ ತೀರದ ಪ್ರದೇಶಗಳ ಸುಮಾರು 15ಕ್ಕೂ ಹೆಚ್ಚು ಮನೆಗಳಿಗೆ ಪ್ರವಾಹದ ನೀರು ನುಗ್ಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಅಲ್ಲಿನ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ನದಿಯ ಮಟ್ಟ 8.6 ಮೀಟರ್ ತಲುಪುತ್ತಿದ್ದಂತೆ ಆಲಡ್ಕ, ಕಂಚಿಕಾರ್ಪೇಟೆ ಹಾಗೂ ಬಂಟ್ವಾಳ ಕೋಟೆಕಣಿ ಭಾಗಗಳ ರಸ್ತೆಗಳಿಗೆ ನೀರು ಹರಿದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಇದೇ ವೇಳೆ ಪಾಣೆಮಂಗಳೂರಿನ ಭಯಂಕರೇಶ್ವರ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶ ಹಾಗೂ ಶ್ಮಶಾನಕ್ಕೂ ಪ್ರವಾಹದ ನೀರು ನುಗ್ಗಿದೆ.

ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯ ಪರಿಣಾಮವಾಗಿ ಉಪ್ಪಿನಂಗಡಿಯಲ್ಲಿ ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳ ನೀರಿನ ಮಟ್ಟವೂ ಏರಿಕೆಯಾಗಿದೆ. ಭಾನುವಾರ ಸಂಜೆ ನದಿಯ ಮಟ್ಟ 30.1 ಮೀಟರ್ ತಲುಪಿದ್ದು, ಬಳಿಕ ಸ್ವಲ್ಪ ಇಳಿಕೆಯಾಗಿದೆ.

ನದಿಪಾತ್ರದ ತಗ್ಗು ಪ್ರದೇಶಗಳು ಜಲಾವೃತವಾಗಿದ್ದರೂ ಉಪ್ಪಿನಂಗಡಿ ಪಟ್ಟಣದಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿಲ್ಲ. ಕುಮಾರಧಾರಾ ನದಿಯ ನೀರಿನ ಮಟ್ಟ ಹೆಚ್ಚಿದ ಹಿನ್ನೆಲೆಯಲ್ಲಿ ವೀರಮಂಗಲ ಭಾಗದ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಸಾರ್ವಜನಿಕರು ಆ ಭಾಗಗಳಿಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.


ಮತ್ತಷ್ಟು ಓದಿ :

ಭಾರೀ ಮಳೆ ಹಿನ್ನೆಲೆ ಆಗಸ್ಟ್ 3ರಂದು ಶಾಲೆ-ಕಾಲೇಜುಗಳಿಗೆ ರಜೆ; ಜಿಲ್ಲಾಡಳಿತದಿಂದ ಮಹತ್ವದ ಆದೇಶ

drusti news logo

drustinews

Drusti News delivers timely, accurate, and reliable Kannada news covering local, state, national, and global events

Join WhatsApp

Join Now

Join Instagram

Join Now

1 thought on “ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಳಿತ: ಬಂಟ್ವಾಳದಲ್ಲಿ 15ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ನಿವಾಸಿಗಳ ಸ್ಥಳಾಂತರ”

Leave a Comment