---Advertisement---

ಭಾರೀ ಮಳೆ ಹಿನ್ನೆಲೆ ಆಗಸ್ಟ್ 4ರಂದು ಶಾಲೆ-ಕಾಲೇಜುಗಳಿಗೆ ರಜೆ; ಜಿಲ್ಲಾಡಳಿತದಿಂದ ಮಹತ್ವದ ಆದೇಶ

drusti news logo
On: August 3, 2026
August 4 School College Holiday Heavy Rain Official Order
---Advertisement---

ಮಂಗಳೂರು : ದ.ಕ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನೆಲೆಯಲ್ಲಿ 2026ರ ಆಗಸ್ಟ್ 4 (ಮಂಗಳವಾರ)ರಂದು ಜಿಲ್ಲೆಯ ಆಯ್ದ ಶಿಕ್ಷಣ ಸಂಸ್ಥೆಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಮಂಗಳೂರು ಉಪವಿಭಾಗ (ಮಂಗಳೂರು, ಬಂಟ್ವಾಳ, ಮೂಡಬಿದ್ರೆ , ಮುಲ್ಕಿ ತಾಲೂಕು ಹಾಗೂ ಉಳ್ಳಾಲ ತಾಲೂಕುಗಳು) ವ್ಯಾಪ್ತಿಯಲ್ಲಿ ಕೆಳಕಂಡ ಶಿಕ್ಷಣ ಸಂಸ್ಥೆಗಳಿಗೆ ಆಗಸ್ಟ್ 4ರಂದು ರಜೆ ಘೋಷಿಸಲಾಗಿದೆ.

  • ಅಂಗನವಾಡಿ ಕೇಂದ್ರಗಳು
  • ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಶಾಲೆಗಳು
  • ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರೌಢಶಾಲೆಗಳು

ಪುತ್ತೂರು ಉಪವಿಭಾಗ (ಪುತ್ತೂರು, ಬೆಳ್ತಂಗಡಿ ಹಾಗೂ ಸುಳ್ಯ ತಾಲೂಕುಗಳು) ವ್ಯಾಪ್ತಿಯಲ್ಲಿ ಕೆಳಕಂಡ ಶಿಕ್ಷಣ ಸಂಸ್ಥೆಗಳಿಗೆ ರಜೆ ಅನ್ವಯವಾಗಲಿದೆ.

  • ಅಂಗನವಾಡಿ ಕೇಂದ್ರಗಳು
  • ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಶಾಲೆಗಳು
  • ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರೌಢಶಾಲೆಗಳು
  • ಪಿಯು ಕಾಲೇಜುಗಳು
  • ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳು

ಪದವಿ, ಸ್ನಾತಕೋತ್ತರ, ಇಂಜಿನಿಯರಿಂಗ್ ಹಾಗೂ ಇತರೆ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ. ಈ ಶಿಕ್ಷಣ ಸಂಸ್ಥೆಗಳಲ್ಲಿ ಎಂದಿನಂತೆ ತರಗತಿಗಳು ಹಾಗೂ ಇತರ ಶೈಕ್ಷಣಿಕ ಚಟುವಟಿಕೆಗಳು ನಡೆಯಲಿವೆ.

ಭಾರೀ ಮಳೆಯ ಕಾರಣ ಸಾರ್ವಜನಿಕರು ಅನಗತ್ಯವಾಗಿ ಹೊರಗೆ ಸಂಚರಿಸದಂತೆ ಜಿಲ್ಲಾಡಳಿತ ಮನವಿ ಮಾಡಿದೆ. ನದಿ, ಹೊಳೆ, ಕೆರೆ, ಜಲಪಾತ ಹಾಗೂ ಸಮುದ್ರ ತೀರದಂತಹ ಅಪಾಯಕಾರಿ ಪ್ರದೇಶಗಳಿಗೆ ತೆರಳದಂತೆ ಸೂಚನೆ ನೀಡಲಾಗಿದೆ.

ಅಗತ್ಯವಿದ್ದಲ್ಲಿ ಮಾತ್ರ ಪ್ರಯಾಣ ಬೆಳೆಸಿ, ಮಕ್ಕಳು ಹಾಗೂ ಹಿರಿಯರ ಸುರಕ್ಷತೆಗೆ ವಿಶೇಷ ಗಮನ ನೀಡುವಂತೆ ಮತ್ತು ಜಿಲ್ಲಾಡಳಿತ ಹಾಗೂ ಹವಾಮಾನ ಇಲಾಖೆಯ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಲಾಗಿದೆ.

drusti news logo

drustinews

Drusti News delivers timely, accurate, and reliable Kannada news covering local, state, national, and global events

Join WhatsApp

Join Now

Join Instagram

Join Now

Leave a Comment