---Advertisement---

ದಕ್ಷಿಣ ಕನ್ನಡ : ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಆಗಸ್ಟ್ 8 ರಂದು ರಜೆ ಘೋಷಣೆ

drusti news logo
On: August 7, 2026
Dakshina Kannada August 8 School Holiday Puttur Subdivision Order
---Advertisement---

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು ಹಾಗೂ ಶಾಲಾ-ಕಾಲೇಜುಗಳಿಗೆ ದಿನಾಂಕ 08.08.2026 ರಂದು ರಜೆಯನ್ನು ಘೋಷಿಸಿ ಆದೇಶ ಹೊರಡಿಸಲಾಗಿದೆ.
ಪುತ್ತೂರು ಉಪವಿಭಾಗದ ತಹಶೀಲ್ದಾರರು ಸಲ್ಲಿಸಿದ ಮನವಿಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಆದೇಶದಂತೆ, ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು, ಪದವಿಪೂರ್ವ ಕಾಲೇಜುಗಳು, ಐಟಿಐಗಳು, ಡಿಪ್ಲೊಮಾ ಕಾಲೇಜುಗಳು ಸೇರಿದಂತೆ 12ನೇ ತರಗತಿ ತನಕದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಅನ್ವಯವಾಗಲಿದೆ. ಆದರೆ, ವಿಶ್ವವಿದ್ಯಾಲಯಗಳ ಅಧೀನದಲ್ಲಿರುವ ಪದವಿ, ಸ್ನಾತಕೋತ್ತರ ಹಾಗೂ ಇತರ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ಅನ್ವಯಿಸುವುದಿಲ್ಲ.

ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ನದಿ, ಹೊಳೆ ಹಾಗೂ ತಗ್ಗು ಪ್ರದೇಶಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ರಸ್ತೆ ಸಂಪರ್ಕಕ್ಕೂ ಅಡಚಣೆ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಮಕ್ಕಳು ನೀರು ತುಂಬಿರುವ ಪ್ರದೇಶಗಳು, ಕೆರೆ, ಹೊಳೆ ಹಾಗೂ ನದಿ ತೀರಗಳಿಗೆ ತೆರಳದಂತೆ ಪೋಷಕರು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಅಲ್ಲದೆ, ಶಾಲಾ-ಕಾಲೇಜು ಆಡಳಿತ ಮಂಡಳಿಗಳು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.

ತುರ್ತು ಪರಿಸ್ಥಿತಿ ಎದುರಾದಲ್ಲಿ ಸಹಾಯಕ್ಕಾಗಿ ಜಿಲ್ಲಾಡಳಿತ ಸಹಾಯವಾಣಿ 1077 ಅಥವಾ 0824-2442590 ಸಂಖ್ಯೆಗೆ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


drusti news logo

drustinews

Drusti News delivers timely, accurate, and reliable Kannada news covering local, state, national, and global events

Join WhatsApp

Join Now

Join Instagram

Join Now

Leave a Comment