---Advertisement---

ತಾಯಿಯ ಅನಾರೋಗ್ಯದಿಂದ ಮನನೊಂದು ಅಪ್ರಾಪ್ತ ಬಾಲಕ ಆತ್ಮಹತ್ಯೆ

drusti news logo
On: August 20, 2026
ಪುಂಜಾಲಕಟ್ಟೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣದ ಕುರಿತು ಪೊಲೀಸ್ ತನಿಖೆ
---Advertisement---

ಪುಂಜಾಲಕಟ್ಟೆ: ತಾಯಿಯ ಅನಾರೋಗ್ಯದ ವಿಚಾರದಿಂದ ಮನನೊಂದು 9ನೇ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ದುಃಖದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪಿಲಾತಬೆಟ್ಟು ಗ್ರಾಮದ ನೈನಾಡಿನಲ್ಲಿ ಬುಧವಾರ ನಡೆದಿದೆ.

ಮೃತ ಬಾಲಕನನ್ನು ನೈನಾಡು ನಿವಾಸಿ ಹಾಗೂ ನೈನಾಡು ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಅಶೋಕ್ ಎಂದು ಗುರುತಿಸಲಾಗಿದೆ.

ಬಾಲಕನ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ತಂದೆ ಇಲ್ಲದ ಹಿನ್ನೆಲೆಯಲ್ಲಿ ತಾಯಿಯೇ ಕುಟುಂಬಕ್ಕೆ ಪ್ರಮುಖ ಆಸರೆಯಾಗಿದ್ದರು.ತಾಯಿಯ ಆರೋಗ್ಯದ ಬಗ್ಗೆ ಬಾಲಕ ತೀವ್ರವಾಗಿ ಚಿಂತಿತನಾಗಿದ್ದ ಎನ್ನಲಾಗಿದ್ದು, ಇದೇ ಕಾರಣದಿಂದ ಆತ ಮಾನಸಿಕವಾಗಿ ನೊಂದಿದ್ದ ಎಂದು ತಿಳಿದುಬಂದಿದೆ.ಮೃತ ಬಾಲಕ ಮೂವರು ಗಂಡು ಮಕ್ಕಳಲ್ಲಿ ಕಿರಿಯವನಾಗಿದ್ದ. ಬುಧವಾರ ಮನೆಯಲ್ಲಿ ಬಾಲಕ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಘಟನೆಯ ನಿಖರ ಕಾರಣ ಹಾಗೂ ಇತರ ಅಂಶಗಳ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.


ಮತ್ತಷ್ಟು ಓದಿ :

ಮಂಗಳೂರಿನಲ್ಲಿ ವಂದೇ ಭಾರತ್ ರೈಲಿನ ಆಹಾರ ಪೂರೈಕೆ ವಾಹನ ತಪಾಸಣೆ; ಸ್ವಚ್ಛತೆ, ಗುಣಮಟ್ಟದ ಬಗ್ಗೆ ಅಧಿಕಾರಿಗಳ ಪರಿಶೀಲನೆ

drusti news logo

drustinews

Drusti News delivers timely, accurate, and reliable Kannada news covering local, state, national, and global events

Join WhatsApp

Join Now

Join Instagram

Join Now

1 thought on “ತಾಯಿಯ ಅನಾರೋಗ್ಯದಿಂದ ಮನನೊಂದು ಅಪ್ರಾಪ್ತ ಬಾಲಕ ಆತ್ಮಹತ್ಯೆ”

Leave a Comment