---Advertisement---

ಬಜಪೆ ಬಳಿ ಭೀಕರ ಅಪಘಾತ: ಬಸ್-ಬೈಕ್ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು – ಪತ್ನಿಗೆ ಗಂಭೀರ ಗಾಯ

drusti news logo
On: July 28, 2026
ಬಜಪೆ ರಸ್ತೆ ಅಪಘಾತದಲ್ಲಿ ಬಸ್-ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದ ಸ್ಥಳದ ದೃಶ್ಯ
---Advertisement---

ಮಂಗಳೂರು: ಬಜಪೆ–ಕಟೀಲು ರಾಜ್ಯ ಹೆದ್ದಾರಿ 67ರ ಎಕ್ಕಾರು ಬೋಳೋಡಿ ಸಮೀಪ ಸೋಮವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಮೃತರನ್ನು ಮಹಮ್ಮದ್ ಬಶೀರ್ (45) ಎಂದು ಗುರುತಿಸಲಾಗಿದೆ. ಇವರು ಮೂಲತಃ ಕಿನ್ನಿಗೋಳಿ ಕಾಪಿಕಾಡು ನಿವಾಸಿಯಾಗಿದ್ದು, ಪ್ರಸ್ತುತ ಬಜಪೆ ಪಟ್ಟಣದ ವಸತಿ ಸಮುಚ್ಚಯದಲ್ಲಿ ವಾಸಿಸುತ್ತಿದ್ದರು.

ಕಟೀಲು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಬಜಪೆ ಕಡೆಯಿಂದ ಸಾಗುತ್ತಿದ್ದ ಬೈಕ್ ನಡುವೆ ಎಕ್ಕಾರು ಬೋಳೋಡಿ ಬಳಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸವಾರ ಮಹಮ್ಮದ್ ಬಶೀರ್ ಅವರ ತಲೆಗೆ ತೀವ್ರ ಗಾಯಗಳಾಗಿವೆ.

ಅಪಘಾತದ ತೀವ್ರತೆಗೆ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಬೈಕ್‌ನ ಹಿಂಭಾಗದಲ್ಲಿ ಪ್ರಯಾಣಿಸುತ್ತಿದ್ದ ಮಹಮ್ಮದ್ ಬಶೀರ್ ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಅಪಘಾತದ ಕುರಿತು ತನಿಖೆ ಮುಂದುವರಿಸಿದ್ದಾರೆ.


ಮತ್ತಷ್ಟು ಓದಿ :

ಕಾಪು ಬಸ್ ನಿಲ್ದಾಣದಲ್ಲಿ ಎರಡು ಖಾಸಗಿ ಬಸ್‌ಗಳ ಡಿಕ್ಕಿ; ನಾಲ್ವರ ಬಂಧನ, ಬಸ್‌ಗಳು ಪೊಲೀಸ್ ವಶಕ್ಕೆ

drusti news logo

drustinews

Drusti News delivers timely, accurate, and reliable Kannada news covering local, state, national, and global events

Join WhatsApp

Join Now

Join Instagram

Join Now

1 thought on “ಬಜಪೆ ಬಳಿ ಭೀಕರ ಅಪಘಾತ: ಬಸ್-ಬೈಕ್ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು – ಪತ್ನಿಗೆ ಗಂಭೀರ ಗಾಯ”

Leave a Comment