ಬಂಟ್ವಾಳ : ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ 17 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ವ್ಯಕ್ತಿಯೊಬ್ಬ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಸೋಮವಾರ (ಜುಲೈ 6) ಬೆಳಿಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೊಂತಿಮಾರು ಬಸ್ ನಿಲ್ದಾಣದ ಬಳಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿನಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ.
ಪೊಲೀಸರ ಮಾಹಿತಿ ಪ್ರಕಾರ, ಬೆಳಿಗ್ಗೆ ಸುಮಾರು 8.45 ಗಂಟೆಗೆ ವಿದ್ಯಾರ್ಥಿನಿ ಕಾಲೇಜಿಗೆ ತೆರಳಲು ಬಸ್ ನಿಲ್ದಾಣದಲ್ಲಿ ನಿಂತಿದ್ದ ವೇಳೆ, ಬಂಟ್ವಾಳದ ಮಂಚಿ ನಿವಾಸಿ ಮೊಹಮ್ಮದ್ ಜವ್ವಾರ್ (28) ಎಂಬಾತ ಏಕಾಏಕಿ ಮಚ್ಚಿನಿಂದ ದಾಳಿ ನಡೆಸಿದ್ದಾನೆ. ದಾಳಿಯಲ್ಲಿ ವಿದ್ಯಾರ್ಥಿನಿಯ ತಲೆ ಹಾಗೂ ಕೈಗೆ ಗಾಯಗಳಾಗಿವೆ.
ಘಟನೆಯ ಬಳಿಕ ಆರೋಪಿ ಸ್ವತಃ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಗಾಯಗೊಂಡ ವಿದ್ಯಾರ್ಥಿನಿಯನ್ನು ತಕ್ಷಣ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ಮೂಲಗಳು ತಿಳಿಸಿವೆ.
ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಹಲ್ಲೆಗೆ ನಿಖರ ಕಾರಣವೇನು ಎಂಬ ಕುರಿತು ತನಿಖೆ ಮುಂದುವರಿದಿದೆ.
ಮತ್ತಷ್ಟು ಓದಿ
ಕಳಂಜದಲ್ಲಿ ರಾತ್ರಿ ವೃದ್ಧೆಯ ಮನೆ ಬಳಿ ಅಪರಿಚಿತನ ಸಂಚಾರ; ಪ್ರಶ್ನಿಸಿದ ವೃದ್ಧೆಯನ್ನು ತಳ್ಳಿ ಪರಾರಿ
ಶೋರೂಮ್‌ನಿಂದ ಹೊರಬಂದ ಕೆಲವೇ ಗಂಟೆಗಳಲ್ಲಿ ಭೀಕರ ಅಪಘಾತ! ಸುಳ್ಯದಲ್ಲಿ ನೂತನ ಕಾರು ಲಾರಿಗೆ ಡಿಕ್ಕಿ, ಮಹಿಳೆಗೆ ಗಾಯ










1 thought on “ಬಂಟ್ವಾಳದಲ್ಲಿ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸರಿಗೆ ಶರಣು”