---Advertisement---

ಬೆಳ್ತಂಗಡಿಯಲ್ಲಿ ಭೀಕರ ರಸ್ತೆ ಅಪಘಾತ : ಬೈಕ್–ಸ್ಕೂಟಿ ಡಿಕ್ಕಿ, ಕಾಲೇಜು ವಿದ್ಯಾರ್ಥಿ ದುರ್ಮರಣ

drusti news logo
On: July 19, 2026
ಬೆಳ್ತಂಗಡಿಯಲ್ಲಿ ಬೈಕ್ ಮತ್ತು ಸ್ಕೂಟಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತ
---Advertisement---

ಬೆಳ್ತಂಗಡಿ, ಜು. 19: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮದ್ದಡ್ಕ ಸಮೀಪ ಶನಿವಾರ ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಹಿಂಬದಿಯಲ್ಲಿ ಪ್ರಯಾಣಿಸುತ್ತಿದ್ದ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮೃತ ಯುವಕನನ್ನು ಬಂಟ್ವಾಳದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಬಳ್ಳಮಂಜ ನಿವಾಸಿ ಕೌಶಿಕ್ ಗೌಡ (19) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡಿರುವ ಮಡಂತ್ಯಾರ್ ನಿವಾಸಿ ಭರತ್ (20) ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಸ್ಥಳೀಯರ ಮಾಹಿತಿ ಪ್ರಕಾರ, ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಸಂಚರಿಸುತ್ತಿದ್ದ ವೇಳೆ ಸಂಪರ್ಕ ರಸ್ತೆಯಿಂದ ಸ್ಕೂಟಿ ಏಕಾಏಕಿ ಮುಖ್ಯ ರಸ್ತೆಗೆ ಪ್ರವೇಶಿಸಿದ್ದು, ಈ ವೇಳೆ ಎರಡೂ ವಾಹನಗಳ ನಡುವೆ ಭಾರೀ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಅಪಘಾತ ಸಂಭವಿಸಿದ ಮದ್ದಡ್ಕ ಸಮೀಪದ ಈ ಜಂಕ್ಷನ್‌ನಲ್ಲಿ ಈ ಹಿಂದೆಯೂ ಹಲವು ರಸ್ತೆ ಅಪಘಾತಗಳು ಸಂಭವಿಸಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಸಂಪರ್ಕ ರಸ್ತೆ ಮತ್ತು ರಾಷ್ಟ್ರೀಯ ಹೆದ್ದಾರಿ ಸೇರುವ ಈ ಭಾಗದಲ್ಲಿ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರು ಹಲವು ಬಾರಿ ಒತ್ತಾಯಿಸಿದ್ದರೂ ಅಪಘಾತಗಳು ಮರುಕಳಿಸುತ್ತಿವೆ ಎಂಬ ಆತಂಕ ವ್ಯಕ್ತವಾಗಿದೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.

ಈ ದುರ್ಘಟನೆಯಿಂದ ಮೃತ ಯುವಕನ ಕುಟುಂಬಸ್ಥರು ಹಾಗೂ ಸ್ಥಳೀಯರು ತೀವ್ರ ಶೋಕದಲ್ಲಿದ್ದು, ಗಾಯಾಳು ಭರತ್ ಚಿಕಿತ್ಸೆಯಲ್ಲಿದ್ದಾರೆ.


ಮತ್ತಷ್ಟು ಓದಿ

ಬೆಳೆ ವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನ : ದಕ್ಷಿಣ ಕನ್ನಡದ ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಮಹತ್ವದ ಮಾಹಿತಿ

drusti news logo

drustinews

Drusti News delivers timely, accurate, and reliable Kannada news covering local, state, national, and global events

Join WhatsApp

Join Now

Join Instagram

Join Now

1 thought on “ಬೆಳ್ತಂಗಡಿಯಲ್ಲಿ ಭೀಕರ ರಸ್ತೆ ಅಪಘಾತ : ಬೈಕ್–ಸ್ಕೂಟಿ ಡಿಕ್ಕಿ, ಕಾಲೇಜು ವಿದ್ಯಾರ್ಥಿ ದುರ್ಮರಣ”

Leave a Comment