---Advertisement---

ಬೆಳ್ತಂಗಡಿ ಸುಲ್ಕೇರಿ ಬಳಿ ಕಾರು ಅಪಘಾತ : ವಿದ್ಯುತ್ ಕಂಬಕ್ಕೆ ಡಿಕ್ಕಿ, ಪ್ರಯಾಣಿಕರು ಅಪಾಯದಿಂದ ಪಾರು

drusti news logo
On: June 27, 2026
ಬೆಳ್ತಂಗಡಿ ಸುಲ್ಕೇರಿಯಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಅಪಘಾತಕ್ಕೀಡಾದ ಕಾರು
---Advertisement---

ಬೆಳ್ತಂಗಡಿ : ತಾಲೂಕಿನ ಸುಲ್ಕೇರಿ ಸಮೀಪ ಶುಕ್ರವಾರ ನಸುಕಿನ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪ್ರಾಥಮಿಕ ಮಾಹಿತಿಯಂತೆ, ಸುಲ್ಕೇರಿ ಗ್ರಾಮದ ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಕಾಂಕ್ರೀಟ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಂಬ ಮುರಿದು ಕಾರಿನ ಮೇಲೆಯೇ ಬಿದ್ದಿದ್ದು, ವಾಹನದ ಬಾನೆಟ್, ಬಂಪರ್ ಹಾಗೂ ಇಂಜಿನ್ ಭಾಗಕ್ಕೆ ತೀವ್ರ ಹಾನಿಯಾಗಿದೆ.

ಅಪಘಾತದ ಪರಿಣಾಮ ವಿದ್ಯುತ್ ತಂತಿಗಳು ತುಂಡಾಗಿ ರಸ್ತೆಗೆ ಬಿದ್ದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ. ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ದುರಸ್ತಿ ಕಾರ್ಯ ಆರಂಭಿಸಿದ್ದಾರೆ.

ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.


ಮತ್ತಷ್ಟು ಓದಿ :

ಗಡಾಯಿಕಲ್ಲು ಚಾರಣ ಪುನರಾರಂಭ : ಆನ್‌ಲೈನ್ ನೋಂದಣಿ ಕಡ್ಡಾಯ, ದಿನಕ್ಕೆ 500 ಮಂದಿಗೆ ಮಾತ್ರ ಅವಕಾಶ

ಬೆಳಾಲು ಸ್ಕೂಟಿ ಬೆಂಕಿ ಅವಘಡ : 12 ದಿನಗಳ ಜೀವದ ಹೋರಾಟದ ಬಳಿಕ ಬಾಲಕ ದಿಯಾನ್‌ ಮೃತ್ಯು

ಬೆಳ್ತಂಗಡಿ : ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಇಬ್ಬರು ಬಾಲಕರ ವಿರುದ್ಧ ಪೋಕ್ಸೋ ಪ್ರಕರಣ

drusti news logo

drustinews

Drusti News delivers timely, accurate, and reliable Kannada news covering local, state, national, and global events

Join WhatsApp

Join Now

Join Instagram

Join Now