---Advertisement---

ಸಾಮೂಹಿಕ ಅತ್ಯಾಚಾರ ಪ್ರಕರಣ: 9 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

drusti news logo
On: June 25, 2026
ಪುತ್ತೂರಿನ ದರ್ಬೆ ಅಶ್ವಿನಿ ಸರ್ಕಲ್‌ನಲ್ಲಿ ಮಾದಕ ವಸ್ತು ಸೇವನೆ ಆರೋಪ
---Advertisement---

ದಾವಣಗೆರೆ: ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಮಹಿಳೆಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ 9 ಆರೋಪಿಗಳನ್ನು ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು  ರಿಮ್ಯಾಂಡ್ ಹೋಂ ಗೆ ದಾಖಲಿಸಲಾಗಿದೆ.

ಜೂನ್ 2ರಂದು ನಡೆದಿದ್ದ ಈ ಘಟನೆಗೆ ಸಂಬಂಧಿಸಿದಂತೆ ಬಸವಾಪಟ್ಟಣ ಪೊಲೀಸರು ಈಗಾಗಲೇ ಬಾಲಕ ಸೇರಿದಂತೆ ಒಟ್ಟು 10 ಮಂದಿಯನ್ನು ವಶಕ್ಕೆ ಪಡೆದಿದ್ದರು. ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಜೊತೆಗೆ ಘಟನೆಯ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪವೂ ಇವರ ವಿರುದ್ಧ ದಾಖಲಾಗಿದೆ.

ಬಂಧಿತ 9 ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಬಳಿಕ ದಾವಣಗೆರೆಯ 1ನೇ ಹೆಚ್ಚುವರಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿತು. ಬಳಿಕ ಎಲ್ಲ ಆರೋಪಿಗಳನ್ನು ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಿಸಲಾಯಿತು.

ಪ್ರಕರಣದ ತನಿಖೆ ವೇಳೆ ಆರೋಪಿಗಳು ಘಟನೆಯ ವಿಡಿಯೊ ಹಾಗೂ ಛಾಯಾಚಿತ್ರಗಳನ್ನು ಮೊಬೈಲ್‌ನಲ್ಲಿ ಸಂಗ್ರಹಿಸಿಕೊಂಡು ನಂತರ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವುದು ಬೆಳಕಿಗೆ ಬಂದಿದೆ. ವಿಷಯ ಬಹಿರಂಗವಾಗುತ್ತಿದ್ದಂತೆಯೇ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ವಿಡಿಯೊ ಮತ್ತು ಫೋಟೋಗಳನ್ನು ಅಳಿಸಲು ಯತ್ನಿಸಿದ್ದರೆಂಬ ಮಾಹಿತಿಯೂ ತನಿಖೆಯಲ್ಲಿ ಪತ್ತೆಯಾಗಿದೆ.

ಈ ಹಿನ್ನೆಲೆಯಲ್ಲಿ ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲು ಹಾಗೂ ಸಾಕ್ಷ್ಯಾಧಾರಗಳನ್ನು ಕಲೆಹಾಕುವ ಉದ್ದೇಶದಿಂದ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆಗಳನ್ನೂ ತನಿಖಾ ತಂಡ ಪರಿಶೀಲಿಸುತ್ತಿದೆ. ಪ್ರಕರಣದ ಕುರಿತು ಬಸವಾಪಟ್ಟಣ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

drusti news logo

drustinews

Drusti News delivers timely, accurate, and reliable Kannada news covering local, state, national, and global events

Join WhatsApp

Join Now

Join Instagram

Join Now

Leave a Comment