---Advertisement---

ಮಹಿಳೆ ವಿಚಾರಕ್ಕೆ ಉಂಟಾದ ವೈಷಮ್ಯ, ವ್ಯಕ್ತಿಯ ಕೈ ಕತ್ತರಿಸಿದ ಆರೋಪ

drusti news logo
On: June 24, 2026
Chikkamagaluru Assault Hand Chopped Case
---Advertisement---

ಚಿಕ್ಕಮಗಳೂರು, ಜೂ.24 : ಮಹಿಳೆಯೊಬ್ಬರ ವಿಚಾರವಾಗಿ ಇಬ್ಬರು ವ್ಯಕ್ತಿಗಳ ನಡುವೆ ಉಂಟಾದ ವೈಮನಸ್ಸು ಹಿಂಸಾತ್ಮಕ ತಿರುವು ಪಡೆದು, ವ್ಯಕ್ತಿಯೊಬ್ಬರ ಕೈ ಕತ್ತರಿಸಲ್ಪಟ್ಟಿರುವ ಭೀಕರ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ಬುಧವಾರ ನಡೆದಿದೆ.

ಘಟನೆಯಲ್ಲಿ ಅರುಣ್ (35) ಗಂಭೀರ ಗಾಯಗೊಂಡಿದ್ದು, ಅವರ ಕೈ ಸಂಪೂರ್ಣವಾಗಿ ಕತ್ತರಿಸಲ್ಪಟ್ಟಿದೆ ಎಂದು ತಿಳಿದುಬಂದಿದೆ. ಶೇಷಗಿರಿ (40) ಎಂಬಾತ ಲಾಂಗ್‌ನಿಂದ ಹಲ್ಲೆ ನಡೆಸಿರುವ ಆರೋಪ ಎದುರಿಸುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದ ನಾಗರತ್ನ ಎಂಬ ಮಹಿಳೆಯನ್ನು ಕೇಂದ್ರವಾಗಿಸಿಕೊಂಡು ಅರುಣ್ ಮತ್ತು ಶೇಷಗಿರಿ ನಡುವೆ ವಾಗ್ವಾದ ಉಂಟಾಗಿತ್ತು ಎನ್ನಲಾಗಿದೆ. ಈ ಮಾತಿನ ಚಕಮಕಿ ಕ್ಷಣಾರ್ಧದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಆಕ್ರೋಶಗೊಂಡ ಶೇಷಗಿರಿ ಲಾಂಗ್‌ನಿಂದ ಅರುಣ್ ಮೇಲೆ ದಾಳಿ ನಡೆಸಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಹಲ್ಲೆಯ ಪರಿಣಾಮ ಅರುಣ್ ತೀವ್ರ ರಕ್ತಸ್ರಾವಕ್ಕೊಳಗಾಗಿದ್ದು, ಸ್ಥಳೀಯರು ಹಾಗೂ ಸಂಬಂಧಿಕರ ಸಹಾಯದಿಂದ ಅವರನ್ನು ತಕ್ಷಣ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಗಾಯದ ಗಂಭೀರತೆಯನ್ನು ಪರಿಗಣಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆಯ ನಿಖರ ಕಾರಣ ಮತ್ತು ಘಟನೆಯ ಹಿನ್ನೆಲೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


ಮತ್ತಷ್ಟು ಓದಿ :

ಆಸ್ತಿ ವಿವಾದದ ಭೀಕರ ಅಂತ್ಯ : ಮಗನ ಜೊತೆ ಸೇರಿ ಹೆತ್ತ ತಾಯಿಯನ್ನೇ ಹತ್ಯೆ ಮಾಡಿದ ಮಗಳು

ಉಡುಪಿ : ಪಾಪನಾಶಿನಿ ಸೇತುವೆಯಿಂದ ನದಿಗೆ ಹಾರಿ ಯುವಕ ಆತ್ಮಹತ್ಯೆ; ಸಂಜೆಯ ವೇಳೆ ಮೃತದೇಹ ಪತ್ತೆ

ನೆಲ್ಯಾಡಿ ಸಮೀಪ ಭೀಕರ ರಸ್ತೆ ಅಪಘಾತ : ಬೈಕ್‌ಗಳ ಮುಖಾಮುಖಿ ಡಿಕ್ಕಿಗೆ ಯುವಕ ಬಲಿ

drusti news logo

drustinews

Drusti News delivers timely, accurate, and reliable Kannada news covering local, state, national, and global events

Join WhatsApp

Join Now

Join Instagram

Join Now

Leave a Comment