---Advertisement---

ಬೆಳೆ ವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನ : ದಕ್ಷಿಣ ಕನ್ನಡದ ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಮಹತ್ವದ ಮಾಹಿತಿ

drusti news logo
On: July 19, 2026
ಬೆಳೆ ವಿಮೆ ಯೋಜನೆಯಡಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗಾರರಿಗೆ ನೋಂದಣಿ ಕುರಿತು ಮಾಹಿತಿ
---Advertisement---

ಮಂಗಳೂರು: ಹವಾಮಾನ ವೈಪರೀತ್ಯದಿಂದ ತೋಟಗಾರಿಕೆ ಬೆಳೆಗಳಿಗೆ ಉಂಟಾಗುವ ನಷ್ಟಕ್ಕೆ ಪರಿಹಾರ ಒದಗಿಸುವ ಉದ್ದೇಶದಿಂದ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಜಾರಿಯಲ್ಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರು ಇದರ ಪ್ರಯೋಜನ ಪಡೆಯಬಹುದಾಗಿದೆ. ಯೋಜನೆಯಡಿ ನೋಂದಣಿ ಮಾಡಲು ಜುಲೈ 31 ಕೊನೆಯ ದಿನವಾಗಿದ್ದು, ಅರ್ಹ ರೈತರು ನಿಗದಿತ ಅವಧಿಯೊಳಗೆ ಹೆಸರು ನೋಂದಾಯಿಸಿಕೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಬೆಳೆ ಸಾಲ ಪಡೆದಿರುವ ರೈತರು ತಾವು ಸಾಲ ಪಡೆದಿರುವ ಬ್ಯಾಂಕ್‌ನಲ್ಲೇ ಯೋಜನೆಗೆ ನೋಂದಣಿ ಮಾಡಿಸಿಕೊಳ್ಳಬಹುದು. ಸಾಲ ಪಡೆಯದ ರೈತರು ತಮ್ಮ ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್‌ಗಳ ಮೂಲಕ ಅರ್ಜಿ ಸಲ್ಲಿಸಬಹುದು. ಇದರ ಜೊತೆಗೆ ಸೇವಾ ಕೇಂದ್ರಗಳು ಹಾಗೂ ಗ್ರಾಮ ಒನ್ ಕೇಂದ್ರಗಳಲ್ಲಿ ಕೂಡ ನೋಂದಣಿ ಸೌಲಭ್ಯ ಕಲ್ಪಿಸಲಾಗಿದೆ.

ಯೋಜನೆಯಡಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ನಿಗದಿತ ಪ್ರೀಮಿಯಂ ಮೊತ್ತವನ್ನು ಪಾವತಿಸಬೇಕಿದೆ. ಪ್ರತಿ ಹೆಕ್ಟೇರ್‌ಗೆ ಅಡಿಕೆ ಬೆಳೆಗೆ ₹6,400 ಹಾಗೂ ಕಾಳುಮೆಣಸು ಬೆಳೆಗೆ ₹2,350 ಪ್ರೀಮಿಯಂ ನಿಗದಿಪಡಿಸಲಾಗಿದೆ. ಈ ಯೋಜನೆಯಡಿ ನೋಂದಾಯಿಸಿಕೊಂಡ ರೈತರಿಗೆ ಹವಾಮಾನ ವೈಪರೀತ್ಯದಿಂದ ಬೆಳೆ ಹಾನಿಯಾದಲ್ಲಿ ನಿಯಮಾನುಸಾರ ಪರಿಹಾರ ದೊರೆಯಲಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸುವ ವಿಮಾ ಸಂಸ್ಥೆಯಾಗಿ ಟಾಟಾ ಎಐಜಿ ಆಯ್ಕೆಯಾಗಿದೆ. ಯೋಜನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಅಥವಾ ನೋಂದಣಿ ಕುರಿತು ಯಾವುದೇ ಸಂದೇಹಗಳಿದ್ದಲ್ಲಿ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ವಿಮಾ ಸಂಸ್ಥೆಯ ಪ್ರತಿನಿಧಿಯನ್ನು ಸಂಪರ್ಕಿಸಬಹುದಾಗಿದೆ.

ಯೋಜನೆಗೆ ಸಂಬಂಧಿಸಿದ ಮಾಹಿತಿಗಾಗಿ ಕೆಳಕಂಡ ಅಧಿಕಾರಿಗಳನ್ನು ಸಂಪರ್ಕಿಸಬಹುದು.

  • ಐ.ಕೆ. ದೊಡ್ಡಮನಿ, ಜಂಟಿ ನಿರ್ದೇಶಕರು, ತೋಟಗಾರಿಕೆ ಇಲಾಖೆ – 9448999226
  • ಪ್ರವೀಣ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು – 9449258204
  • ಪ್ರದೀಪ್ ಡಿಸೋಜ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಬಂಟ್ವಾಳ – 9448206393
  • ರೇಖಾ ಎ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ, ಪುತ್ತೂರು – 9731854527
  • ಪ್ರಮೋದ್ ಸಿ.ಎಂ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಸುಳ್ಯ – 9945303149
  • ಚಂದ್ರಶೇಖರ ಕೆ.ಎಸ್, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಬೆಳ್ತಂಗಡಿ – 9448336863
  • ಅಶುತೋಶ್, ಟಾಟಾ ಎಐಜಿ ಸಂಸ್ಥೆಯ ಪ್ರತಿನಿಧಿ – 8809140983

ತೋಟಗಾರಿಕೆ ಇಲಾಖೆ ಪ್ರಕಟಿಸಿರುವ ಮಾಹಿತಿಯಂತೆ, ಅರ್ಹ ರೈತರು ಕೊನೆಯ ದಿನದವರೆಗೆ ಕಾಯದೆ ಶೀಘ್ರದಲ್ಲೇ ನೋಂದಣಿ ಪೂರ್ಣಗೊಳಿಸಿ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಮನವಿ ಮಾಡಲಾಗಿದೆ.


ಮತ್ತಷ್ಟು ಓದಿ :

ಕರ್ನಾಟಕದಲ್ಲಿ ಮತ್ತೆ ಚುರುಕುಗೊಂಡ ಮುಂಗಾರು : ಮುಂದಿನ 7 ದಿನ ರಾಜ್ಯಾದ್ಯಂತ ಮಳೆ ಸಾಧ್ಯತೆ

drusti news logo

drustinews

Drusti News delivers timely, accurate, and reliable Kannada news covering local, state, national, and global events

Join WhatsApp

Join Now

Join Instagram

Join Now

1 thought on “ಬೆಳೆ ವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನ : ದಕ್ಷಿಣ ಕನ್ನಡದ ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಮಹತ್ವದ ಮಾಹಿತಿ”

Leave a Comment