---Advertisement---

ದಕ್ಷಿಣ ಕನ್ನಡದಲ್ಲಿ ಜುಲೈ 2ರಂದು ಶಾಲೆ–ಕಾಲೇಜುಗಳಿಗೆ ರಜೆ; ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶ

drusti news logo
On: July 1, 2026
ಪ್ರತಿಕೂಲ ಹವಾಮಾನ ಹಿನ್ನೆಲೆ ದಕ್ಷಿಣ ಕನ್ನಡದಲ್ಲಿ ಜುಲೈ 2ರಂದು ಶಾಲೆ-ಕಾಲೇಜುಗಳಿಗೆ ರಜೆ
---Advertisement---

ಮಂಗಳೂರು, ಜು. 1: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಕೂಲ ಹವಾಮಾನ ಪರಿಸ್ಥಿತಿ ಮುಂದುವರಿದಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಹಾಗು ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ಜುಲೈ 2, 2026 (ಗುರುವಾರ) ರಂದು ರಜೆ ಘೋಷಿಸಿದೆ.

rain

ಈ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ದರ್ಶನ್ ಎಚ್.ವಿ. ಅವರು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

ಆದೇಶದ ಪ್ರಕಾರ, ಜಿಲ್ಲೆಯ ವ್ಯಾಪ್ತಿಯಲ್ಲಿರುವ ಎಲ್ಲ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪಿಯು ಕಾಲೇಜುಗಳು (12ನೇ ತರಗತಿಯವರೆಗೆ) ಗುರುವಾರ ಕಾರ್ಯನಿರ್ವಹಿಸುವುದಿಲ್ಲ.

ಜಿಲ್ಲಾಡಳಿತದ ಈ ಆದೇಶವು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗಲಿದ್ದು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಜಿಲ್ಲಾಧಿಕಾರಿಯ ಅಧಿಕೃತ ಆದೇಶದಂತೆ ಜುಲೈ 2ರಂದು ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ರಜೆ ಇರಲಿದೆ.


drusti news logo

drustinews

Drusti News delivers timely, accurate, and reliable Kannada news covering local, state, national, and global events

Join WhatsApp

Join Now

Join Instagram

Join Now

1 thought on “ದಕ್ಷಿಣ ಕನ್ನಡದಲ್ಲಿ ಜುಲೈ 2ರಂದು ಶಾಲೆ–ಕಾಲೇಜುಗಳಿಗೆ ರಜೆ; ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶ”

Leave a Comment