---Advertisement---

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ಮುನ್ನೆಚ್ಚರಿಕೆ: ಜುಲೈ 24ರಂದು ಶಾಲೆ, ಅಂಗನವಾಡಿಗಳಿಗೆ ರಜೆ ಘೋಷಣೆ

drusti news logo
On: July 24, 2026
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ಜುಲೈ 24ರಂದು ಶಾಲೆ ಮತ್ತು ಅಂಗನವಾಡಿಗಳಿಗೆ ರಜೆ ಘೋಷಣೆ
---Advertisement---

ಮಂಗಳೂರು, ಜುಲೈ 23: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಮಹತ್ವದ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜುಲೈ 24, 2026 (ಶುಕ್ರವಾರ) ರಂದು ಜಿಲ್ಲೆಯ ಕೆಲವು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲೆಯಾದ್ಯಂತ ಕೆಳಕಂಡ ಶಿಕ್ಷಣ ಸಂಸ್ಥೆಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ.

  • ಎಲ್ಲಾ ಅಂಗನವಾಡಿ ಕೇಂದ್ರಗಳು
  • ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಶಾಲೆಗಳು
  • ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರೌಢಶಾಲೆಗಳು
  • ಎಲ್ಲಾ ಪಿಯು ಕಾಲೇಜುಗಳು
  • ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳು

ಆದೇಶದ ಪ್ರಕಾರ ಪದವಿ, ಸ್ನಾತಕೋತ್ತರ, ಇಂಜಿನಿಯರಿಂಗ್ ಹಾಗೂ ಇತರೆ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ಅನ್ವಯಿಸುವುದಿಲ್ಲ. ಅವುಗಳಲ್ಲಿ ಎಂದಿನಂತೆ ತರಗತಿಗಳು ನಡೆಯಲಿವೆ.

ಭಾರೀ ಮಳೆಯ ಸಾಧ್ಯತೆ ಇರುವುದರಿಂದ ನದಿ, ಹೊಳೆ, ಕೆರೆ ಹಾಗೂ ಸಮುದ್ರ ತೀರದ ಪ್ರದೇಶಗಳಿಗೆ ಅನಗತ್ಯವಾಗಿ ತೆರಳಬಾರದು ಎಂದು ಜಿಲ್ಲಾಡಳಿತ ಸಾರ್ವಜನಿಕರಿಗೆ ಮನವಿ ಮಾಡಿದೆ. ಅಪಾಯಕಾರಿ ಪ್ರದೇಶಗಳಿಂದ ದೂರವಿದ್ದು ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.

ತುರ್ತು ಪರಿಸ್ಥಿತಿಯಲ್ಲಿ ಸಹಾಯಕ್ಕಾಗಿ 1077 ಅಥವಾ 0824-2442590 ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಬಹುದು.


drusti news logo

drustinews

Drusti News delivers timely, accurate, and reliable Kannada news covering local, state, national, and global events

Join WhatsApp

Join Now

Join Instagram

Join Now

1 thought on “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ಮುನ್ನೆಚ್ಚರಿಕೆ: ಜುಲೈ 24ರಂದು ಶಾಲೆ, ಅಂಗನವಾಡಿಗಳಿಗೆ ರಜೆ ಘೋಷಣೆ”

Leave a Comment