ಮಂಗಳೂರು, ಜು.7: ಜಿಲ್ಲೆಯಲ್ಲಿ ಮುಂದುವರಿದಿರುವ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆ ನೀಡಿರುವ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿವರೆಗೆ) ಜುಲೈ 8, 2026ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ವಿದ್ಯಾರ್ಥಿಗಳ ಸುರಕ್ಷತೆಯನ್ನು ಪ್ರಮುಖವಾಗಿ ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 51(ಬಿ) ಅಡಿಯಲ್ಲಿ ಜಿಲ್ಲಾಧಿಕಾರಿಗಳು ಈ ಆದೇಶವನ್ನು ಜಾರಿಗೊಳಿಸಿದ್ದಾರೆ.
ಜಿಲ್ಲಾಡಳಿತ ಸಾರ್ವಜನಿಕರು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸಿ, ಅನಗತ್ಯವಾಗಿ ಅಪಾಯಕಾರಿ ಪ್ರದೇಶಗಳಿಗೆ ತೆರಳದೇ ಸುರಕ್ಷಿತವಾಗಿರಲು ಮನವಿ ಮಾಡಿದೆ.









