---Advertisement---

ದಕ್ಷಿಣ ಕನ್ನಡದಲ್ಲಿ ಇನ್ನು ತಾಲೂಕುವಾರು ಮಳೆ ರಜೆ? ಜಿಲ್ಲಾಡಳಿತದ ಮಹತ್ವದ ಚಿಂತನೆ

drusti news logo
On: July 27, 2026
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದಲ್ಲಿ ಆಗಸ್ಟ್ 1ರಂದು ಶಾಲೆಗಳಿಗೆ ರಜೆ ಘೋಷಿಸಿರುವ ಜಿಲ್ಲಾಧಿಕಾರಿಯ ಆದೇಶ
---Advertisement---

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರ್ಷ ನಿರಂತರ ಮಳೆಯ ಹಿನ್ನೆಲೆ ಶಾಲೆ-ಕಾಲೇಜುಗಳಿಗೆ ಪದೇಪದೇ ರಜೆ ಘೋಷಿಸಲಾಗುತ್ತಿದೆ. ಆದರೆ ಭಾರತೀಯ ಹವಾಮಾನ ಇಲಾಖೆ (IMD) ನೀಡುವ ಮುನ್ಸೂಚನೆ ಮತ್ತು ನೆಲದ ವಾಸ್ತವ ಪರಿಸ್ಥಿತಿಯಲ್ಲಿ ಹಲವು ಬಾರಿ ವ್ಯತ್ಯಾಸ ಕಂಡುಬಂದಿರುವುದರಿಂದ, ಮುಂದಿನ ದಿನಗಳಲ್ಲಿ ಇಡೀ ಜಿಲ್ಲೆಯ ಬದಲು ತಾಲೂಕುವಾರು ಮಳೆ ರಜೆ ಘೋಷಿಸುವ ವ್ಯವಸ್ಥೆ ಜಾರಿಗೆ ತರಲು ಜಿಲ್ಲಾಡಳಿತ ಗಂಭೀರ ಚಿಂತನೆ ನಡೆಸಿದೆ.

ಈ ಬಾರಿ ಜಿಲ್ಲೆಯಲ್ಲಿ ಘೋಷಿಸಲಾದ ಮಳೆ ರಜೆಗಳ ವೇಳೆ ಎಲ್ಲ ತಾಲೂಕುಗಳಲ್ಲೂ ಒಂದೇ ರೀತಿಯ ಮಳೆ ಅಥವಾ ಅಪಾಯದ ಪರಿಸ್ಥಿತಿ ಇರಲಿಲ್ಲ. ಕೆಲವೆಡೆ ಭಾರೀ ಮಳೆಯಾಗಿದ್ದರೆ, ಇನ್ನೂ ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆಯಷ್ಟೇ ದಾಖಲಾಗಿತ್ತು.

ಆದರೂ ಇಡೀ ಜಿಲ್ಲೆಗೆ ರಜೆ ಘೋಷಿಸಿದ್ದರಿಂದ ಅನಗತ್ಯವಾಗಿ ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಯಾಗಿದೆ ಎಂಬ ಅಭಿಪ್ರಾಯ ಶಿಕ್ಷಣ ಸಂಸ್ಥೆಗಳು, ಪೋಷಕರು ಹಾಗೂ ಶಿಕ್ಷಣ ತಜ್ಞರಿಂದ ವ್ಯಕ್ತವಾಗಿದೆ.

ಜಿಲ್ಲಾಡಳಿತದ ಚಿಂತನೆಯ ಪ್ರಕಾರ, ಇನ್ನು ಮುಂದೆ ತಹಶೀಲ್ದಾರ್‌, ಕ್ಷೇತ್ರ ಶಿಕ್ಷಣಾಧಿಕಾರಿ (BEO) ಹಾಗೂ ಸ್ಥಳೀಯ ಅಧಿಕಾರಿಗಳ ವರದಿಯನ್ನು ಆಧರಿಸಿ, ಯಾವ ತಾಲೂಕಿನಲ್ಲಿ ಅಪಾಯದ ಪರಿಸ್ಥಿತಿ ಇದೆಯೋ ಅಲ್ಲಿ ಮಾತ್ರ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸುವ ವ್ಯವಸ್ಥೆ ಜಾರಿಯಾಗುವ ಸಾಧ್ಯತೆ ಇದೆ.

ಇದರಿಂದ ಅಗತ್ಯವಿರುವ ಪ್ರದೇಶಗಳಲ್ಲಿ ಮಾತ್ರ ರಜೆ ಘೋಷಿಸಿ, ಉಳಿದ ತಾಲೂಕುಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಎಂದಿನಂತೆ ನಡೆಸಲು ಅವಕಾಶ ದೊರೆಯಲಿದೆ.

ಈ ಕುರಿತು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಪ್ರತಿಕ್ರಿಯಿಸಿ, ಹವಾಮಾನ ಇಲಾಖೆಯ ಮುನ್ಸೂಚನೆ ಬಂದಾಗ ಮಕ್ಕಳ ಸುರಕ್ಷತೆಯೇ ಮೊದಲ ಆದ್ಯತೆ ಎಂದು ಹೇಳಿದ್ದಾರೆ.

ಶಿಕ್ಷಣವೂ ಮುಖ್ಯ, ಮಕ್ಕಳ ಜೀವವೂ ಅಷ್ಟೇ ಅಮೂಲ್ಯ. ಆದರೆ ಮುಂದಿನ ದಿನಗಳಲ್ಲಿ ತಾಲೂಕುವಾರು ಮಳೆ ರಜೆ ಘೋಷಿಸುವ ವ್ಯವಸ್ಥೆ ಜಾರಿಗೆ ತರುವ ಉದ್ದೇಶವಿದೆ ಎಂದು ಅವರು ತಿಳಿಸಿದ್ದಾರೆ.

ಮಳೆ ರಜೆ ಘೋಷಿಸಿದ್ದರೂ ತರಗತಿ ನಡೆಸಿದ್ದ 10 ಶಾಲೆ-ಕಾಲೇಜುಗಳಿಗೆ ಜಿಲ್ಲಾಡಳಿತ ನೋಟಿಸ್ ನೀಡಿತ್ತು. ಬಳಿಕ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳು ಕ್ಷಮಾಪಣಾ ಪತ್ರ ಸಲ್ಲಿಸಿ, ಇನ್ನು ಮುಂದೆ ಸರ್ಕಾರದ ಆದೇಶವನ್ನು ಪಾಲಿಸುವುದಾಗಿ ಲಿಖಿತ ಭರವಸೆ ನೀಡಿವೆ.

ಕಳೆದ ಕೆಲವು ದಿನಗಳಲ್ಲೂ ರಜೆ ಇದ್ದರೂ ತರಗತಿ ನಡೆಸಿದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ, ಅಧಿಕಾರಿಗಳು ಕೆಲ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ತರಗತಿಗಳನ್ನು ಸ್ಥಗಿತಗೊಳಿಸಿರುವುದಾಗಿ ತಿಳಿದುಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ಪ್ರಮುಖ ಸ್ಥಾನ ಹೊಂದಿದ್ದು, ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದಲೂ ಸಾವಿರಾರು ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಪದೇಪದೇ ಮಳೆ ರಜೆ ಘೋಷಿಸುವುದರಿಂದ:

  • ಪಠ್ಯಕ್ರಮ ಪೂರ್ಣಗೊಳಿಸಲು ತೊಂದರೆ ಉಂಟಾಗುತ್ತಿದೆ.
  • ಪರೀಕ್ಷಾ ವೇಳಾಪಟ್ಟಿಯ ಮೇಲೆ ಪರಿಣಾಮ ಬೀಳುತ್ತಿದೆ.
  • ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಅನಾನುಕೂಲವಾಗುತ್ತಿದೆ.
  • ಹೊರ ಜಿಲ್ಲೆಗಳ ವಿದ್ಯಾರ್ಥಿಗಳು ಹಾಗೂ ಪೋಷಕರಿಗೂ ಸಮಸ್ಯೆಯಾಗುತ್ತಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಮತ್ತಷ್ಟು ಓದಿ :

ವಿಟ್ಲದಲ್ಲಿ ತಡರಾತ್ರಿ ಮನೆಗೆ ನುಗ್ಗಿ ವೃದ್ಧನ ಚಿನ್ನದ ಸರ ದರೋಡೆ; ₹2.60 ಲಕ್ಷ ಮೌಲ್ಯದ ಸರ ಕಸಿದು ಪರಾರಿ

drusti news logo

drustinews

Drusti News delivers timely, accurate, and reliable Kannada news covering local, state, national, and global events

Join WhatsApp

Join Now

Join Instagram

Join Now

1 thought on “ದಕ್ಷಿಣ ಕನ್ನಡದಲ್ಲಿ ಇನ್ನು ತಾಲೂಕುವಾರು ಮಳೆ ರಜೆ? ಜಿಲ್ಲಾಡಳಿತದ ಮಹತ್ವದ ಚಿಂತನೆ”

Leave a Comment