ಧರ್ಮಸ್ಥಳ : ಧರ್ಮಸ್ಥಳ ಗ್ರಾಮದ ನೇತ್ರಾವತಿ ಸೇತುವೆ ಸಮೀಪದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಮತ್ತು ಕೆಲವು ಬಟ್ಟೆಗಳು ಪತ್ತೆಯಾಗಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ.
ಸ್ಥಳೀಯ ನಿವಾಸಿಗಳು ಅರಣ್ಯ ಪ್ರದೇಶದಲ್ಲಿ ಅಸ್ಥಿಪಂಜರ ಕಂಡು ತಕ್ಷಣ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಘಟನಾ ಸ್ಥಳದ ಸುತ್ತಮುತ್ತಲಿನ ಪ್ರದೇಶವನ್ನು ಪರಿಶೀಲಿಸಿದರು.
ಬಳಿಕ ಮಂಗಳೂರಿನಿಂದ ಆಗಮಿಸಿದ ವೈದ್ಯಕೀಯ ತಜ್ಞರ ತಂಡ ಸ್ಥಳದಲ್ಲೇ ಅಗತ್ಯ ಪ್ರಾಥಮಿಕ ಪರೀಕ್ಷೆ ಮತ್ತು ಪರಿಶೀಲನಾ ಕಾರ್ಯಗಳನ್ನು ಕೈಗೊಂಡಿದೆ. ನಂತರ ಅಸ್ಥಿಪಂಜರವನ್ನು ಧರ್ಮಸ್ಥಳ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ರುದ್ರಭೂಮಿಯಲ್ಲಿ ದಫನ ಮಾಡಲಾಗಿದೆ.
ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ವ್ಯಕ್ತಿಯ ಗುರುತು ಪತ್ತೆಹಚ್ಚುವ ಜೊತೆಗೆ ಸಾವಿನ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಮತ್ತಷ್ಟು ಓದಿ
ಚಾರ್ಮಾಡಿ ಹೆದ್ದಾರಿಯಲ್ಲಿ ಕಾರು ಅಪಘಾತ : ಡಿವೈಡರ್‌ಗೆ ಡಿಕ್ಕಿ ಹೊಡೆದು ವಾಹನ ಜಖಂ
ಮಡಂತ್ಯಾರು ಸಮೀಪ ಭೀಕರ ರಸ್ತೆ ಅಪಘಾತ : ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಸೇರಿ ಇಬ್ಬರ ದುರ್ಮರಣ















3 thoughts on “ಧರ್ಮಸ್ಥಳದ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ”