---Advertisement---

“ಮಾರ್ಗದರ್ಶನ ಕೊಟ್ಟರೆ ಕೇಳುತ್ತೇನೆ, ಟೀಕೆ ಮಾಡಿದರೆ ನಡೆಯಲ್ಲ” : ಡಿ.ಕೆ. ಶಿವಕುಮಾರ್

drusti news logo
On: June 29, 2026
DK Shivakumar Warns Opposition Over Criticism Of Congress Government
---Advertisement---

ಬೆಂಗಳೂರು: ವಿರೋಧ ಪಕ್ಷಗಳು ಸರ್ಕಾರ ಮತ್ತು ತಮ್ಮ ವಿರುದ್ಧ ಮಾಡುತ್ತಿರುವ ಟೀಕೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದು, “ಬೇರೆಯವರನ್ನು ಟೀಕಿಸಿದಂತೆ ನನ್ನನ್ನು ಅಥವಾ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದರೆ ನಡೆಯುವುದಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

ಭಾನುವಾರ ಹೆಬ್ಬಾಳ ಜಂಕ್ಷನ್‌ನಲ್ಲಿ ಹೆಬ್ಬಾಳ ಜಂಕ್ಷನ್‌ವರೆಗಿನ ಸುರಂಗ ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಅಧಿಕಾರದಲ್ಲಿದ್ದಾಗ ಕೆಲಸ ಮಾಡಲಿಲ್ಲ

ವಿಪಕ್ಷಗಳು ಅಧಿಕಾರದಲ್ಲಿದ್ದಾಗ ಜನಪರ ಕೆಲಸಗಳನ್ನು ಮಾಡದೆ ಈಗ ಟೀಕೆ ಮಾಡುತ್ತಿರುವುದಾಗಿ ಡಿ.ಕೆ. ಶಿವಕುಮಾರ್ ಆರೋಪಿಸಿದರು. “ಒಂದು ಲಾರಿ ಕಸವನ್ನೂ ಗೊಬ್ಬರ ಅಥವಾ ಇಂಧನವಾಗಿ ಪರಿವರ್ತಿಸುವ ಕೆಲಸ ಮಾಡಲಿಲ್ಲ. ಆದರೆ ಈಗ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಪ್ರತಿಭಟನೆ ಸೇರಿದಂತೆ ಏನೇ ಮಾಡಿದರೂ ಅಭಿವೃದ್ಧಿ ಕಾರ್ಯಗಳನ್ನು ತಡೆಯಲು ಸಾಧ್ಯವಿಲ್ಲ. ಉತ್ತಮ ಸಲಹೆ ಅಥವಾ ಮಾರ್ಗದರ್ಶನ ನೀಡಿದರೆ ಅದನ್ನು ಸ್ವಾಗತಿಸುತ್ತೇನೆ” ಎಂದು ಹೇಳಿದರು.

ಟೌನ್‌ಶಿಪ್‌ಗಳ ಕುರಿತು ಸ್ಪಷ್ಟನೆ

ಬೆಂಗಳೂರಿನ ಮೇಲಿನ ಆಡಳಿತಾತ್ಮಕ ಒತ್ತಡ ಕಡಿಮೆ ಮಾಡಲು ಐದು ಪಾಲಿಕೆಗಳನ್ನು ರಚಿಸುವ ನಿರ್ಧಾರವನ್ನು ಕೈಗೊಂಡಿದ್ದು, ಇದು ತಮ್ಮೊಬ್ಬರ ನಿರ್ಧಾರವಲ್ಲ ಎಂದು ಅವರು ಸ್ಪಷ್ಟಪಡಿಸಿದರು. ವಿರೋಧ ಪಕ್ಷಗಳ ಸಲಹೆ ಪಡೆದು ಈ ತೀರ್ಮಾನ ಮಾಡಲಾಗಿದೆ ಎಂದ ಅವರು, ಯಲಹಂಕ, ಕೆಂಗೇರಿ ಸೇರಿದಂತೆ ಹಲವು ಟೌನ್‌ಶಿಪ್‌ಗಳ ರೂಪುರೇಷೆಗಳನ್ನು ಹಿಂದೆ ಅವರೇ ಸಿದ್ಧಪಡಿಸಿದ್ದು, ಈಗ ಅದನ್ನೇ ಟೀಕಿಸುತ್ತಿದ್ದಾರೆ ಎಂದು ಹೇಳಿದರು.

ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್ ಹಾನಿಗೊಳಗಾದ ಸಂದರ್ಭದಲ್ಲಿ ಸಾಕಷ್ಟು ಟೀಕೆಗಳು ಕೇಳಿಬಂದಿದ್ದವು. ಆದರೆ ಅದೇ ರಾತ್ರಿ ಸ್ಥಳಕ್ಕೆ ತೆರಳಿ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಲಾಯಿತು. ಬಳಿಕ ಎಲ್ಲಾ ಗೇಟ್‌ಗಳನ್ನು ಹಂತ ಹಂತವಾಗಿ ಬದಲಾಯಿಸುವ ನಿರ್ಧಾರವೂ ಕೈಗೊಳ್ಳಲಾಯಿತು ಎಂದು ತಿಳಿಸಿದರು.

ಬೆಂಗಳೂರಿನ ಅಭಿವೃದ್ಧಿಗೆ ₹1.50 ಲಕ್ಷ ಕೋಟಿ ಯೋಜನೆ

ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗಾಗಿ ₹1.50 ಲಕ್ಷ ಕೋಟಿ ವೆಚ್ಚದ ಯೋಜನೆಯನ್ನು ರೂಪಿಸಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು. ಸಚಿವ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ಜನರ ಆಸ್ತಿ ದಾಖಲೆಗಳನ್ನು ಸುರಕ್ಷಿತಗೊಳಿಸುವ ಕೆಲಸ ಸಮರ್ಥವಾಗಿ ನಡೆಯುತ್ತಿದ್ದು, ಸುಮಾರು 30ರಿಂದ 40 ಲಕ್ಷ ಕುಟುಂಬಗಳಿಗೆ ಆಸ್ತಿ ದಾಖಲೆಗಳನ್ನು ವಿತರಿಸುವ ಯೋಜನೆ ಜಾರಿಗೊಳ್ಳಲಿದೆ ಎಂದು ತಿಳಿಸಿದರು.


ಮತ್ತಷ್ಟು ಓದಿ :

ಅಮಿತ್ ಶಾ ರಾಷ್ಟ್ರಪತಿ ಭೇಟಿ ಬಳಿಕ ಸಂಪುಟ ಪುನಾರಚನೆ ಚರ್ಚೆ ತೀವ್ರ; ರಾಜಕೀಯ ವಲಯದಲ್ಲಿ ಹೆಚ್ಚಿದ ಕುತೂಹಲ

“ರೈತರನ್ನು ಬೀದಿಗೆ ತಳ್ಳುವ ಹುನ್ನಾರ” : ಬಿಡದಿ ಟೌನ್‌ಶಿಪ್ ವಿರುದ್ಧ ಆರ್. ಅಶೋಕ್ ಕಿಡಿ

drusti news logo

drustinews

Drusti News delivers timely, accurate, and reliable Kannada news covering local, state, national, and global events

Join WhatsApp

Join Now

Join Instagram

Join Now

Leave a Comment