ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಗಡಿಯಾರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಾಸನ ಮೂಲದ ಕಾರು ಚಾಲಕ ಮೃತಪಟ್ಟಿದ್ದು, ಕಾರಿನಲ್ಲಿದ್ದ ಇನ್ನು ಮೂವರು ಗಾಯಗೊಂಡಿದ್ದಾರೆ.
ಬುಧವಾರ ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಹಾಸನದಿಂದ ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರು ಪಲ್ಟಿಯಾಗಿ ಸಂಪೂರ್ಣ ಜಖಂಗೊಂಡಿದೆ.
ಅಪಘಾತದಲ್ಲಿ ಕಾರು ಚಾಲಕ ಲಕ್ಷ್ಮೀಕಾಂತ್ ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಹಾಗೂ ಸಾರ್ವಜನಿಕರು ತಕ್ಷಣ ಧಾವಿಸಿ ಗಾಯಾಳುಗಳನ್ನು ಕಾರಿನಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಿದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಲಕ್ಷ್ಮೀಕಾಂತ್ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ರಂಜಿತ್, ದರ್ಶನ್ ಹಾಗೂ ಶೋಭಾ ಗಾಯಗೊಂಡಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದ ಬಳಿಕ ಕೆಲಕಾಲ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಬಳಿಕ ಪೊಲೀಸರು ಸುಗಮ ಸಂಚಾರಕ್ಕೆ ಕ್ರಮ ಕೈಗೊಂಡರು.
ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಮತ್ತಷ್ಟು ಓದಿ :
ಚಾರ್ಮಾಡಿ ಹೆದ್ದಾರಿಯಲ್ಲಿ ಕಾರು ಅಪಘಾತ : ಡಿವೈಡರ್‌ಗೆ ಡಿಕ್ಕಿ ಹೊಡೆದು ವಾಹನ ಜಖಂ
ಧರ್ಮಸ್ಥಳದ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ
ಮಡಂತ್ಯಾರು ಸಮೀಪ ಭೀಕರ ರಸ್ತೆ ಅಪಘಾತ : ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಸೇರಿ ಇಬ್ಬರ ದುರ್ಮರಣ














1 thought on “ಗಡಿಯಾರ ಬಳಿ ಕಾರು ಅಪಘಾತ: ಹಾಸನ ಮೂಲದ ಚಾಲಕ ಸಾವು, ಮೂವರಿಗೆ ಗಾಯ”