---Advertisement---

ಕಡಬದಲ್ಲಿ ದಾರುಣ ಘಟನೆ: ಗಾಳಿ-ಮಳೆಗೆ ಅಡಿಕೆ ಮರ ಮುರಿದು ಬಿದ್ದು ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಮೃತ

drusti news logo
On: July 31, 2026
ಕಡಬದ ಕುಂತೂರು ಗ್ರಾಮದಲ್ಲಿ ಗಾಳಿ-ಮಳೆಗೆ ಅಡಿಕೆ ಮರ ಬಿದ್ದು ವ್ಯಕ್ತಿ ಮೃತ
---Advertisement---

ಕಡಬ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಬಿರುಗಾಳಿಯ ನಡುವೆ ದುರ್ಘಟನೆಯೊಂದು ಸಂಭವಿಸಿದೆ. ಕಡಬ ತಾಲೂಕಿನ ಕುಂತೂರು ಗ್ರಾಮದ ಕೇವಳದಲ್ಲಿ ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಅಡಿಕೆ ಮರ ಮುರಿದು ಬಿದ್ದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಕುಂತೂರು ಗ್ರಾಮದ ಕೇವಳ ನಿವಾಸಿ ಯಾದವ ಗೌಡ (66) ಎಂದು ಗುರುತಿಸಲಾಗಿದೆ.

ಶುಕ್ರವಾರ ಬೆಳಿಗ್ಗೆ ಯಾದವ ಗೌಡ ಅವರು ತಮ್ಮ ಅಡಿಕೆ ತೋಟದಲ್ಲಿ ದೈನಂದಿನ ಕೆಲಸದಲ್ಲಿ ತೊಡಗಿದ್ದ ವೇಳೆ ಏಕಾಏಕಿ ಭಾರೀ ಗಾಳಿ ಮತ್ತು ಮಳೆ ಆರಂಭವಾಗಿದೆ. ಇದೇ ವೇಳೆ ಬಲವಾದ ಗಾಳಿಯ ಹೊಡೆತಕ್ಕೆ ಅಡಿಕೆ ಮರವೊಂದು ಮುರಿದು ಅವರ ಮೇಲೆ ಬಿದ್ದಿದೆ.

ಮರ ತಲೆ ಹಾಗೂ ದೇಹದ ಮೇಲೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡ ಯಾದವ ಗೌಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕಡಬ ತಹಶೀಲ್ದಾರ್ ಗಣೇಶ್ ಸವಣೂರ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.


drusti news logo

drustinews

Drusti News delivers timely, accurate, and reliable Kannada news covering local, state, national, and global events

Join WhatsApp

Join Now

Join Instagram

Join Now

Leave a Comment