---Advertisement---

ಕಡಬ: ಕಾಲೇಜು ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ; ಯುವಕನ ವಿರುದ್ಧ ಪ್ರಕರಣ ದಾಖಲು

drusti news logo
On: August 13, 2026
ಕಡಬದಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಪ್ರಕರಣ
---Advertisement---

ಕಡಬ: ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಪ್ರೀತಿಸುವಂತೆ ಒತ್ತಾಯಿಸಿ ನಿರಂತರವಾಗಿ ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಚಾರ್ವಾಕ ಗ್ರಾಮದ ಪದ್ಮನಾಭ ಎಂಬಾತನ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

18 ವರ್ಷದ ವಿದ್ಯಾರ್ಥಿನಿ ಕಾಲೇಜಿನಿಂದ ಮನೆಗೆ ತೆರಳುವ ಸಂದರ್ಭದಲ್ಲಿ ಆರೋಪಿ ಆಕೆಯನ್ನು ಹಿಂಬಾಲಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಮನೆಯವರು ಎಚ್ಚರಿಕೆ ನೀಡಿದರೂ ಆರೋಪಿ ತನ್ನ ವರ್ತನೆಯನ್ನು ಮುಂದುವರಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಜುಲೈ 29ರಂದು ಯುವತಿಯ ತಾಯಿ ಹಾಗೂ ಅಕ್ಕನಿಗೆ ಕೇಳಿಸುವಂತೆ ಆರೋಪಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಳಿಕ ಆಗಸ್ಟ್ 10ರಂದು ಮತ್ತೆ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ, ಆಕೆಯ ಅಕ್ಕನಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ನಿರಂತರ ಕಿರುಕುಳ ಹಾಗೂ ಬೆದರಿಕೆ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಆಗಸ್ಟ್ 11ರಂದು ಕಡಬ ಪೊಲೀಸರಿಗೆ ದೂರು ನೀಡಿದ್ದಾರೆ.

ಯುವತಿ ನೀಡಿದ ದೂರಿನ ಆಧಾರದ ಮೇಲೆ ಕಡಬ ಪೊಲೀಸರು ಅಪರಾಧ ಸಂಖ್ಯೆ 96/2026ರಲ್ಲಿ BNS ಕಲಂ 78(2) ಹಾಗೂ 351(2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


ಮತ್ತಷ್ಟು ಓದಿ :

ಬ್ಲೂ ಡಾರ್ಟ್‌ನಲ್ಲಿ ಡೆಲಿವರಿ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ನೇಮಕಾತಿ: ಪ್ರತಿ ಪ್ಯಾಕೇಜ್‌ಗೆ ₹22 ಗಳಿಕೆ

drusti news logo

drustinews

Drusti News delivers timely, accurate, and reliable Kannada news covering local, state, national, and global events

Join WhatsApp

Join Now

Join Instagram

Join Now

1 thought on “ಕಡಬ: ಕಾಲೇಜು ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ; ಯುವಕನ ವಿರುದ್ಧ ಪ್ರಕರಣ ದಾಖಲು”

Leave a Comment