---Advertisement---

Karnataka Rain Updates : ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಮುಂದುವರಿಕೆ; ಬೆಳ್ತಂಗಡಿಯಲ್ಲಿ ದಾಖಲೆಯ ಮಳೆ, ಉಡುಪಿಗೆ ಆರೆಂಜ್ ಅಲರ್ಟ್

drusti news logo
On: August 2, 2026
ದಕ್ಷಿಣ ಕನ್ನಡದಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಉಡುಪಿ ಜಿಲ್ಲೆಗೆ ಘೋಷಿಸಲಾದ ಆರೆಂಜ್ ಅಲರ್ಟ್‌
---Advertisement---

ಬೆಂಗಳೂರು/ಮಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಆಗಸ್ಟ್ 1ರ ಬೆಳಗ್ಗೆ 8:30ರಿಂದ ಆಗಸ್ಟ್ 2ರ ಬೆಳಗ್ಗೆ 7:30ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ಅತ್ಯಧಿಕ 348.5 ಮಿ.ಮೀ ಮಳೆ ದಾಖಲಾಗಿದೆ. ಇದೇ ತಾಲೂಕಿನ ಕಲ್ಮಂಜದಲ್ಲಿ 283.5 ಮಿ.ಮೀ ಮಳೆಯಾಗಿದೆ.

Dakshina Kannada Heavy Rain

ಉಡುಪಿ ಜಿಲ್ಲೆಯಲ್ಲಿ ಬೆಳಗ್ಗಿನಿಂದಲೇ ನಿರಂತರ ಮಳೆಯಾಗುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಗಂಟೆಗೆ 40ರಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ತಗ್ಗು ಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದಿರಬೇಕು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ 30 ಸದಸ್ಯರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡವನ್ನು ಲಾಯಿಲ ಗ್ರಾಮಕ್ಕೆ ನಿಯೋಜಿಸಲಾಗಿದೆ. ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ತಂಡ ಸಜ್ಜಾಗಿದೆ.

ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಕೊಯ್ನಾ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಪ್ರಸ್ತುತ 49,000 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕೃಷ್ಣಾ ನದಿಗೆ 34,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. 105 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಈಗಾಗಲೇ 91 ಟಿಎಂಸಿ ನೀರು ಸಂಗ್ರಹವಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯ ಪರಿಣಾಮ ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ (KRS) ಜಲಾಶಯದಲ್ಲಿ ನೀರಿನ ಮಟ್ಟ ವೇಗವಾಗಿ ಏರಿಕೆಯಾಗುತ್ತಿದೆ. ಕಳೆದ ಎರಡು ದಿನಗಳಲ್ಲಿ ಸುಮಾರು 5 ಅಡಿ ನೀರಿನ ಮಟ್ಟ ಹೆಚ್ಚಳ ಕಂಡುಬಂದಿದ್ದು, ಪ್ರಸ್ತುತ ಜಲಾಶಯದಲ್ಲಿ 97 ಅಡಿ ನೀರು ಸಂಗ್ರಹವಾಗಿದೆ.

drusti news logo

drustinews

Drusti News delivers timely, accurate, and reliable Kannada news covering local, state, national, and global events

Join WhatsApp

Join Now

Join Instagram

Join Now

1 thought on “Karnataka Rain Updates : ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಮುಂದುವರಿಕೆ; ಬೆಳ್ತಂಗಡಿಯಲ್ಲಿ ದಾಖಲೆಯ ಮಳೆ, ಉಡುಪಿಗೆ ಆರೆಂಜ್ ಅಲರ್ಟ್”

Leave a Comment