ಅಪಾಯಕಾರಿ ತಿರುವಿನಲ್ಲಿ ಸಂಭವಿಸಿದ ಘಟನೆ; ಕೆಲಕಾಲ ಸಂಚಾರದಲ್ಲಿ ವ್ಯತ್ಯಯ
ಕಿನ್ನಿಗೋಳಿ: ಕಿನ್ನಿಗೋಳಿ-ಮೂಲ್ಕಿ ರಾಜ್ಯ ಹೆದ್ದಾರಿಯ ಕಂಚನಕೆರೆ ಸಮೀಪದ ಅಂಗರಗುಡ್ಡೆಯ ತಿರುವಿನಲ್ಲಿ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ.
ಮಾಹಿತಿಯ ಪ್ರಕಾರ, ಕೈಕಂಬದಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಕಾರಿಗೆ ಅಂಗರಗುಡ್ಡೆಯ ತಿರುವಿನ ಬಳಿ ಕಿನ್ನಿಗೋಳಿ ದಿಕ್ಕಿಗೆ ಸಾಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ.
ಅಪಘಾತದ ನಂತರ ಎರಡೂ ವಾಹನಗಳ ಚಾಲಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಇದರಿಂದ ಹೆದ್ದಾರಿಯಲ್ಲಿ ಕೆಲಕಾಲ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿತು. ಘಟನಾ ಸ್ಥಳದಲ್ಲಿ ವಾಹನಗಳ ಸಾಲು ಕೂಡ ಕಂಡುಬಂದಿತು.
ಘಟನೆಯ ಮಾಹಿತಿ ತಿಳಿದು ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಅಪಘಾತಕ್ಕೀಡಾದ ಎರಡೂ ವಾಹನಗಳನ್ನು ರಸ್ತೆ ಬದಿಗೆ ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಿದರು.
ಅಂಗರಗುಡ್ಡೆಯ ಈ ತಿರುವು ಅಪಾಯಕಾರಿ ಪ್ರದೇಶವೆಂದು ಪರಿಗಣಿಸಲಾಗುತ್ತಿದ್ದು, ಇಲ್ಲಿ ವಾಹನ ಸವಾರರು ಹೆಚ್ಚಿನ ಎಚ್ಚರಿಕೆಯಿಂದ ಸಂಚರಿಸುವ ಅಗತ್ಯವಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸದಿರುವುದು ಸಮಾಧಾನದ ಸಂಗತಿಯಾಗಿದೆ.
ಇದನ್ನು ಓದಿ :
ಚಾರ್ಮಾಡಿ ಘಾಟಿಯಲ್ಲಿ ಎಸ್‌ಐಟಿ ಅಧಿಕಾರಿಗಳ ಕಾರು ಪಲ್ಟಿ; ಅಪಾಯದಿಂದ ಪಾರಾದ ನಾಲ್ವರು










1 thought on “ಕಿನ್ನಿಗೋಳಿ-ಮೂಲ್ಕಿ ಹೆದ್ದಾರಿಯಲ್ಲಿ ಅಪಘಾತ : ಕಾರಿಗೆ ಲಾರಿ ಡಿಕ್ಕಿ, ಇಬ್ಬರು ಸುರಕ್ಷಿತ”