ಸುಳ್ಯ ಸಮೀಪದ ಕೊಯನಾಡು ಗ್ರಾಮದ ದೇವರಕೊಲ್ಲಿ ಪ್ರದೇಶದಲ್ಲಿ ಟೋವಿಂಗ್ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ನಡೆದಿದೆ.
ಕೇರಳ ನೋಂದಣಿ ಸಂಖ್ಯೆಯ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಸವಾರ ಅಪಘಾತದ ವೇಳೆ ತೀವ್ರ ಗಾಯಗೊಂಡಿದ್ದು, ಘಟನೆ ಕಂಡ ಸಾರ್ವಜನಿಕರು ತಕ್ಷಣ ನೆರವಿಗೆ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡರು. ಬಳಿಕ ಗಾಯಾಳುವನ್ನು ಆಂಬ್ಯುಲೆನ್ಸ್ ಮೂಲಕ ಸುಳ್ಯದ ಕೆವಿಜಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆಗಾಗಿ ದಾಖಲಿಸಲಾಯಿತು.
ಗಾಯಗೊಂಡ ಸವಾರನ ಗುರುತು ಸೇರಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮತ್ತಷ್ಟು ಓದಿ



















1 thought on “ಕೊಯನಾಡು ಬಳಿ ಅಪಘಾತ; ಟೋವಿಂಗ್ ವಾಹನ-ಬೈಕ್ ಡಿಕ್ಕಿಗೆ ಸವಾರ ಗಾಯ”