ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹೆಸರನ್ನು ಬಳಸಿಕೊಂಡು ಭಕ್ತರನ್ನು ವಂಚಿಸಲು ಯತ್ನಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ದೇವಸ್ಥಾನದ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದೆ.
ನಾಗರ ಪಂಚಮಿ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವ್ಯಾಪಕವಾಗಿ ಹರಿದಾಡುತ್ತಿದ್ದು, ₹750 ಮುಂಗಡ ಹಣ ಪಾವತಿಸಿದರೆ ದೇವಸ್ಥಾನದ ಸೇವೆಗಳನ್ನು ಭಕ್ತರ ಪರವಾಗಿ ನೆರವೇರಿಸಿ, ಬಳಿಕ ಪ್ರಸಾದವನ್ನು ಕಳುಹಿಸಿಕೊಡಲಾಗುವುದು ಎಂದು ವಿಡಿಯೋದಲ್ಲಿ ಹೇಳಲಾಗಿದೆ ಎನ್ನಲಾಗಿದೆ.
ದೇವಸ್ಥಾನದ ಹೆಸರಿನಲ್ಲಿ ಹಣ ವಸೂಲಿ ಆರೋಪ
ದೇವಸ್ಥಾನದ ಅಧಿಕೃತ ವ್ಯವಸ್ಥೆಯೊಂದಿಗೆ ಯಾವುದೇ ಸಂಬಂಧವಿಲ್ಲದ ರೀತಿಯಲ್ಲಿ ವಿಡಿಯೋ ಪ್ರಸಾರವಾಗುತ್ತಿದ್ದು, ಭಕ್ತರಿಂದ ಹಣ ಪಡೆಯುವ ಉದ್ದೇಶದಿಂದ ದೇವಸ್ಥಾನದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಅನುಮಾನ ವ್ಯಕ್ತವಾಗಿದೆ.
ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ದೇವಸ್ಥಾನದ ಆಡಳಿತ ಮಂಡಳಿಯ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ, ಭಕ್ತರು ವಂಚನೆಗೆ ಒಳಗಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಭಕ್ತರು ಎಚ್ಚರಿಕೆ ವಹಿಸುವಂತೆ ಮನವಿ
ಸಾಮಾಜಿಕ ಜಾಲತಾಣಗಳಲ್ಲಿ ಕಂಡುಬರುವ ಇಂತಹ ವಿಡಿಯೋ ಅಥವಾ ಲಿಂಕ್ಗಳನ್ನು ನಂಬಿ ಯಾವುದೇ ಅಪರಿಚಿತ ಖಾತೆ ಅಥವಾ ವ್ಯಕ್ತಿಗೆ ಹಣ ವರ್ಗಾವಣೆ ಮಾಡದಂತೆ ಭಕ್ತರಿಗೆ ಎಚ್ಚರಿಕೆ ನೀಡಲಾಗಿದೆ.
ದೇವಸ್ಥಾನದ ಹೆಸರಿನಲ್ಲಿ ನಡೆಯುತ್ತಿರುವ ಈ ರೀತಿಯ ಚಟುವಟಿಕೆಯ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದೆ.
ಮತ್ತಷ್ಟು ಓದಿ :
ಬಿಪಿಎಲ್ ಕಾರ್ಡ್ : ಹೊಸ ಆಹಾರ ಸಚಿವರ ಮಹತ್ವದ ಸೂಚನೆ; ಸೆ.30ರೊಳಗೆ ಇ-ಕೆವೈಸಿ ಕಡ್ಡಾಯ











1 thought on “ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ವಂಚನೆ ಆರೋಪ; ಪೊಲೀಸರಿಗೆ ದೂರು”