---Advertisement---

ನೆಲ್ಯಾಡಿ ಸಮೀಪ ಭೀಕರ ರಸ್ತೆ ಅಪಘಾತ : ಬೈಕ್‌ಗಳ ಮುಖಾಮುಖಿ ಡಿಕ್ಕಿಗೆ ಯುವಕ ಬಲಿ

drusti news logo
On: June 24, 2026
ನೆಲ್ಯಾಡಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಅಪಘಾತ ಸಂಭವಿಸಿದ ಸ್ಥಳ
---Advertisement---

ನೆಲ್ಯಾಡಿ, ಜೂ.24: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೌಕ್ರಾಡಿ ಗ್ರಾಮದ ಪರಿಯಶಾಂತಿ ಸಮೀಪ ಬುಧವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾಸರಗೋಡು ಮೂಲದ ಯುವಕ ಮೃತಪಟ್ಟಿದ್ದು, ಮತ್ತೋರ್ವ ಸವಾರ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಮೃತರನ್ನು ಕಾಸರಗೋಡು ಜಿಲ್ಲೆಯ ಏರಿಕ್ಕುಲಂ ನಿವಾಸಿ ರಿಜೇಶ್ ವಿ (33) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಗಿರೀಶ್ ಅವರು ಕೊಕ್ಕಡ ಗ್ರಾಮದ ಕೌಕ್ರಾಡಿ ನಿವಾಸಿಯಾಗಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಭ್ಯ ಮಾಹಿತಿಯಂತೆ, ಗುಂಡ್ಯ ಕಡೆಯಿಂದ ಕೊಕ್ಕಡದತ್ತ ಸಂಚರಿಸುತ್ತಿದ್ದ ಗಿರೀಶ್ ಅವರ ಬೈಕ್ ತಿರುವು ಪಡೆಯುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ರಿಜೇಶ್ ಅವರ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ಸವಾರರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.

ಅಪಘಾತದ ತೀವ್ರತೆಯಿಂದ ರಿಜೇಶ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ಗಿರೀಶ್ ಅವರನ್ನು ಸ್ಥಳೀಯರು ಹಾಗೂ ಸಾರ್ವಜನಿಕರ ನೆರವಿನಿಂದ ತಕ್ಷಣ ಆಸ್ಪತ್ರೆಗೆ ರವಾನಿಸಲಾಗಿದೆ.


drusti news logo

drustinews

Drusti News delivers timely, accurate, and reliable Kannada news covering local, state, national, and global events

Join WhatsApp

Join Now

Join Instagram

Join Now

1 thought on “ನೆಲ್ಯಾಡಿ ಸಮೀಪ ಭೀಕರ ರಸ್ತೆ ಅಪಘಾತ : ಬೈಕ್‌ಗಳ ಮುಖಾಮುಖಿ ಡಿಕ್ಕಿಗೆ ಯುವಕ ಬಲಿ”

Leave a Comment