ಪುತ್ತೂರು : ತಾಲೂಕಿನ ಇರ್ದೆ ಗ್ರಾಮದ ಬೆಂದ್ರುತೀರ್ಥ ಸೀರೆ ಹೊಳೆಯ ಪ್ರದೇಶದಲ್ಲಿ ಅಕ್ರಮವಾಗಿ ಮರಳು ಸಂಗ್ರಹಣೆ ಮತ್ತು ಸಾಗಣೆ ನಡೆಸಲಾಗುತ್ತಿರುವ ಬಗ್ಗೆ ಮಾಹಿತಿ ಪಡೆದ ಪುತ್ತೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಕ್ರಮ ಕೈಗೊಂಡಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಸುಷ್ಮಾ ಜಿ. ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಗಸ್ತು ಕಾರ್ಯದಲ್ಲಿದ್ದ ವೇಳೆ ಹೊಳೆಯ ಪ್ರದೇಶದಲ್ಲಿ ಮೂರು ಪಿಕ್ಅಪ್ ವಾಹನಗಳಿಗೆ ಮರಳು ತುಂಬಲಾಗುತ್ತಿರುವುದು ಗಮನಕ್ಕೆ ಬಂದಿದೆ. ಪೊಲೀಸರು ಸ್ಥಳಕ್ಕೆ ತಲುಪುತ್ತಿದ್ದಂತೆಯೇ ಮರಳು ತುಂಬಿಸುವ ಕಾರ್ಯದಲ್ಲಿ ತೊಡಗಿದ್ದವರು ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳದಲ್ಲಿದ್ದ ಮೂರು ಪಿಕ್ಅಪ್ ವಾಹನಗಳ ಚಾಲಕರಾದ ಅಬ್ದುಲ್ ರಜಾಕ್, ಮಹಮ್ಮದ್ ಇರ್ಫಾನ್ ಹಾಗೂ ಅಲಿ ಕುಂಞ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮರಳು ಸಾಗಣೆಗೆ ಸಂಬಂಧಿಸಿದ ಯಾವುದೇ ಮಾನ್ಯ ಪರವಾನಿಗೆ ತಮ್ಮ ಬಳಿ ಇಲ್ಲ ಎಂದು ಅವರು ತಿಳಿಸಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಅಕ್ರಮ ಮರಳು ಸಾಗಣೆ ಹಾಗೂ ಸಂಗ್ರಹಣೆ ಆರೋಪದಡಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ಮತ್ತಷ್ಟು ಓದಿ :
ಪುತ್ತೂರು ರೈಲ್ವೆ ನಿಲ್ದಾಣ ಅಭಿವೃದ್ಧಿಗೆ ನಾಳೆ ಚಾಲನೆ
ಪುತ್ತೂರಿನಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ : ಜೂನ್ 18ರಿಂದ ಭಾರೀ ವಾಹನಗಳಿಗೆ ಪ್ರವೇಶ ನಿರ್ಬಂಧ
















1 thought on “ಪುತ್ತೂರಿನಲ್ಲಿ ಅಕ್ರಮ ಮರಳುಗಾರಿಕೆಗೆ ಪೊಲೀಸರ ದಾಳಿ; ಪ್ರಕರಣ ದಾಖಲು”