---Advertisement---

ಪುತ್ತೂರು: ಗೆಲ್ಲು ಕಡಿಯುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ವ್ಯಕ್ತಿ ದುರ್ಮರಣ

drusti news logo
On: July 9, 2026
ಪುತ್ತೂರಿನ ಪೆರ್ನೆಯಲ್ಲಿ ಗೆಲ್ಲು ಕಡಿಯುವ ವೇಳೆ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಮೃತಪಟ್ಟ ಘಟನೆ
---Advertisement---

ಪುತ್ತೂರು : ಗೆಲ್ಲು ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ಪುತ್ತೂರು ತಾಲೂಕಿನ ಪೆರ್ನೆ ಗ್ರಾಮದ ಚಿಂಕ್ರಗುರಿ ಪ್ರದೇಶದಲ್ಲಿ ನಡೆದಿದೆ.

ಮೃತರನ್ನು ಪೆರ್ನೆ ಗ್ರಾಮದ ಚಿಂಕ್ರಗುರಿ ನಿವಾಸಿ ಚಂದಪ್ಪ ಪೂಜಾರಿ ಎಂದು ಗುರುತಿಸಲಾಗಿದೆ.

ಲಭ್ಯ ಮಾಹಿತಿಯ ಪ್ರಕಾರ, ಚಂದಪ್ಪ ಪೂಜಾರಿ ಅವರು ಗೆಲ್ಲು ಕಡಿಯುವ ಕೆಲಸದಲ್ಲಿ ನಿರತರಾಗಿದ್ದ ವೇಳೆ ವಿದ್ಯುತ್ ತಂತಿ ತಗುಲಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮೃತ ಚಂದಪ್ಪ ಪೂಜಾರಿ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದು, ಅವರ ನಿಧನದಿಂದ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.


ಮತ್ತಷ್ಟು ಓದಿ

ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದಲ್ಲಿ ಭಕ್ತೆಯ ₹80 ಸಾವಿರ ಕಳ್ಳತನ; 24 ಗಂಟೆಯಲ್ಲೇ ಮೂವರು ಮಹಿಳೆಯರ ಬಂಧನ

ಬೈಕಂಪಾಡಿ ಹೆದ್ದಾರಿ ದರೋಡೆ ಪ್ರಕರಣ: ಮೂವರು ಬಂಧನ, ಉಳಿದ 13 ಆರೋಪಿಗಳಿಗಾಗಿ ತೀವ್ರ ಶೋಧ

drusti news logo

drustinews

Drusti News delivers timely, accurate, and reliable Kannada news covering local, state, national, and global events

Join WhatsApp

Join Now

Join Instagram

Join Now

1 thought on “ಪುತ್ತೂರು: ಗೆಲ್ಲು ಕಡಿಯುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ವ್ಯಕ್ತಿ ದುರ್ಮರಣ”

Leave a Comment