---Advertisement---

ವಿವಾಹಿತೆಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ: ಗ್ರಾಮೀಣ ಅಂಚೆ ಸಿಬ್ಬಂದಿ ಬಂಧನ, 14 ದಿನ ನ್ಯಾಯಾಂಗ ವಶ

drusti news logo
On: June 25, 2026
Police arrest accused in Dharmasthala sexual assault case and produce him before court in Belthangady
---Advertisement---

ಬೆಳ್ತಂಗಡಿ: ವಿವಾಹಿತ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸರು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದು, ನ್ಯಾಯಾಲಯವು ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ಮಹಿಳೆಯೊಬ್ಬರು, 2023ರ ಡಿಸೆಂಬರ್ ತಿಂಗಳಲ್ಲಿ ತಮ್ಮ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಿ ಜೂನ್ 7ರಂದು ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿ ಆರೋಪಿಯ ಪತ್ತೆಗೆ ಮುಂದಾಗಿದ್ದರು.

ತನಿಖೆ ವೇಳೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕುತ್ತೋಡಿ ನಿವಾಸಿ ಸುರೇಶ್ (35) ಎಂಬಾತನ ಪಾತ್ರ ಬೆಳಕಿಗೆ ಬಂದಿದ್ದು, ಆತ ಪ್ರಸ್ತುತ ಅರಸಿನಮಕ್ಕಿ ಗ್ರಾಮದಲ್ಲಿ ಗ್ರಾಮೀಣ ಅಂಚೆ ವಿತರಕರಾಗಿ ಸೇವೆ ಸಲ್ಲಿಸುತ್ತಿದ್ದಾನೆ ಎಂದು ತಿಳಿದುಬಂದಿದೆ. ಬಳಿಕ ಜೂನ್ 8ರ ರಾತ್ರಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಬಂಧಿಸಿದರು.

ಬಂಧಿತನನ್ನು ವಿಚಾರಣೆಗೆ ಒಳಪಡಿಸಿದ ನಂತರ ಜೂನ್ 9ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಪ್ರಕರಣದ ದಾಖಲೆಗಳು ಮತ್ತು ತನಿಖೆಯ ಮಾಹಿತಿಯನ್ನು ಪರಿಶೀಲಿಸಿದ ನ್ಯಾಯಾಲಯ, ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.

ಪ್ರಕರಣದ ತನಿಖೆ ಮತ್ತು ಬಂಧನ ಕಾರ್ಯಾಚರಣೆಯನ್ನು ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ. ಅವರ ಮಾರ್ಗದರ್ಶನದಲ್ಲಿ ನಡೆಸಲಾಗಿದೆ. ವೃತ್ತ ನಿರೀಕ್ಷಕ ರವಿ ಬಿ.ಎಸ್. ನೇತೃತ್ವದಲ್ಲಿ ಧರ್ಮಸ್ಥಳ ಪ್ರಭಾರ ಸಬ್ ಇನ್‌ಸ್ಪೆಕ್ಟರ್ ಕಿಶೋರ್ ಪಿ., ಸಬ್ ಇನ್‌ಸ್ಪೆಕ್ಟರ್ ಸಮರ್ಥ್ ಆರ್. ಗಾಣಿಗೇರ ಹಾಗೂ ಪೊಲೀಸ್ ಸಿಬ್ಬಂದಿ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.

drusti news logo

drustinews

Drusti News delivers timely, accurate, and reliable Kannada news covering local, state, national, and global events

Join WhatsApp

Join Now

Join Instagram

Join Now

1 thought on “ವಿವಾಹಿತೆಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ: ಗ್ರಾಮೀಣ ಅಂಚೆ ಸಿಬ್ಬಂದಿ ಬಂಧನ, 14 ದಿನ ನ್ಯಾಯಾಂಗ ವಶ”

Leave a Comment