---Advertisement---

ಉಡುಪಿಯಲ್ಲಿ ಅಕ್ರಮ ಗಾಂಜಾ ಮಾರಾಟಕ್ಕೆ ಪೊಲೀಸರ ಬ್ರೇಕ್: ಪಾನ್ ಸ್ಟಾಲ್ ಮೇಲೆ ದಾಳಿ, 625.83 ಗ್ರಾಂ ಗಾಂಜಾ ವಶ

drusti news logo
On: July 23, 2026
ಉಡುಪಿಯ ಯೆರ್ಮಾಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಪ್ರಕರಣ
---Advertisement---

ಉಡುಪಿ, ಜು. 23: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬಡಾ ಗ್ರಾಮದ ಯೆರ್ಮಾಲ್ ಪ್ರದೇಶದಲ್ಲಿರುವ ಪಾನ್ ಸ್ಟಾಲ್‌ನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ, 625.83 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಅನಿಲ್ ಎಂದು ಗುರುತಿಸಲಾಗಿದೆ.

ಪೊಲೀಸರಿಗೆ ಲಭಿಸಿದ್ದ ವಿಶ್ವಾಸಾರ್ಹ ಮಾಹಿತಿಯಂತೆ, ಯೆರ್ಮಾಲ್‌ನಲ್ಲಿರುವ ಅನಿಲ್‌ಗೆ ಸೇರಿದ ಪಾನ್ ಸ್ಟಾಲ್‌ನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ನಡೆಯುತ್ತಿತ್ತು. ಈ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ ವೇಳೆ, ಅಂಗಡಿಯಲ್ಲಿ ಸಂಗ್ರಹಿಸಿಟ್ಟಿದ್ದ 625.83 ಗ್ರಾಂ ಗಾಂಜಾ ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಂಡಿದ್ದಾರೆ.

ಘಟನಾ ಸ್ಥಳದಲ್ಲಿಯೇ ಆರೋಪಿಯನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಈ ಕಾರ್ಯಾಚರಣೆ ಕಾರ್ಕಳ ಉಪವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಎಸ್. ವಿಜಯಪ್ರಸಾದ್ ಹಾಗೂ ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ ಅವರ ಮಾರ್ಗದರ್ಶನದಲ್ಲಿ ನಡೆಯಿತು.

ಕಾರ್ಯಾಚರಣೆಯಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಪಿಎಸ್‌ಐಗಳಾದ ಶಕ್ತಿವೇಲು ಮತ್ತು ಅನಿಲ್ ಕುಮಾರ್ ಟಿ. ನಾಯಕ್, ಎಎಸ್‌ಐ ಗಿರೀಶ್ ಯು.ಆರ್., ಹಾಗೂ ಪೊಲೀಸ್ ಸಿಬ್ಬಂದಿಗಳಾದ ಕೃಷ್ಣಪ್ರಸಾದ್, ಮಿಥುನ್, ಸಂದೇಶ್ ಭಂಡಾರಿ, ರಾಘವೇಂದ್ರ ಸೇರಿದಂತೆ ಇತರರು ಭಾಗವಹಿಸಿದ್ದರು.

ಘಟನೆಯ ಬಳಿಕ ಉಡುಪಿ ಜಿಲ್ಲಾ ಸೋಕೋ (SOCO) ತಂಡ ಸ್ಥಳಕ್ಕೆ ಭೇಟಿ ನೀಡಿ, ವಶಪಡಿಸಿಕೊಂಡ ಮಾದಕ ವಸ್ತುವನ್ನು ಪರಿಶೀಲಿಸಿ ತನಿಖಾಧಿಕಾರಿಗಳಿಗೆ ಅಗತ್ಯ ತಾಂತ್ರಿಕ ಸಹಕಾರ ನೀಡಿತು.

ಬಂಧಿತ ಅನಿಲ್‌ನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಾಂಜಾ ಪೂರೈಕೆ ಜಾಲ ಹಾಗೂ ಇತರರ ಪಾತ್ರದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.


ಮತ್ತಷ್ಟು ಓದಿ :

ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದು 5 ವರ್ಷದ ಬಾಲಕಿ ಸಾವು, ಹಲವರಿಗೆ ಗಾಯ

ಮಂಗಳೂರಿನಲ್ಲಿ ಸೈಬರ್ ವಂಚನೆಗೆ ಬ್ಯಾಂಕ್ ಖಾತೆ ದುರ್ಬಳಕೆ ಆರೋಪ: ಸ್ನೇಹಿತನ ವಿರುದ್ಧ ಯುವಕನ ದೂರು

drusti news logo

drustinews

Drusti News delivers timely, accurate, and reliable Kannada news covering local, state, national, and global events

Join WhatsApp

Join Now

Join Instagram

Join Now

1 thought on “ಉಡುಪಿಯಲ್ಲಿ ಅಕ್ರಮ ಗಾಂಜಾ ಮಾರಾಟಕ್ಕೆ ಪೊಲೀಸರ ಬ್ರೇಕ್: ಪಾನ್ ಸ್ಟಾಲ್ ಮೇಲೆ ದಾಳಿ, 625.83 ಗ್ರಾಂ ಗಾಂಜಾ ವಶ”

Leave a Comment