ಉಪ್ಪಿನಂಗಡಿ : ತಾಂತ್ರಿಕ ದೋಷ ಉಂಟಾದ ಖಾಸಗಿ ಬಸ್‌ವೊಂದು ನಿಯಂತ್ರಣ ಕಳೆದುಕೊಂಡು ವೃತ್ತಕ್ಕೆ ಡಿಕ್ಕಿ ಹೊಡೆದ ಘಟನೆ ಸೋಮವಾರ ಉಪ್ಪಿನಂಗಡಿಯಲ್ಲಿ ನಡೆದಿದೆ. ಚಾಲಕನ ಸಮಯೋಚಿತ ನಿರ್ಧಾರದಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಮಂಗಳೂರಿನಿಂದ ಉಪ್ಪಿನಂಗಡಿಗೆ ಆಗಮಿಸಿದ್ದ ಖಾಸಗಿ ಬಸ್‌ನಲ್ಲಿದ್ದ ಪ್ರಯಾಣಿಕರು ಇಳಿದ ಬಳಿಕ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸುವ ಉದ್ದೇಶದಿಂದ ಚಾಲಕ ರಿವರ್ಸ್ ಮಾಡಲು ಮುಂದಾಗಿದ್ದರು. ಇದೇ ವೇಳೆ ಬಸ್ ಅನಿರೀಕ್ಷಿತವಾಗಿ ಮುಂದಕ್ಕೆ ಚಲಿಸಲಾರಂಭಿಸಿದೆ.
ವಾಹನವನ್ನು ನಿಯಂತ್ರಣಕ್ಕೆ ತರಲು ಚಾಲಕ ಬ್ರೇಕ್ ಪ್ರಯೋಗಿಸಿದರೂ ಬಸ್ ನಿಲ್ಲದಿರುವುದು ಗಮನಕ್ಕೆ ಬಂದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಚಾಲಕ, ಇತರ ವಾಹನಗಳು ಹಾಗೂ ಸಾರ್ವಜನಿಕರಿಗೆ ಅಪಾಯ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬಸ್‌ನ್ನು ರಸ್ತೆ ಮಧ್ಯದಲ್ಲಿರುವ ವೃತ್ತಕ್ಕೆ ಡಿಕ್ಕಿ ಹೊಡೆಸಿ ನಿಲ್ಲಿಸಿದ್ದಾರೆ.
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದ್ದು, ಚಾಲಕನ ಜಾಗರೂಕತೆ ಮತ್ತು ತ್ವರಿತ ನಿರ್ಧಾರದಿಂದ ಭಾರೀ ದುರಂತವೊಂದು ತಪ್ಪಿದಂತಾಗಿದೆ.
ಮತ್ತಷ್ಟು ಓದಿ :
2026-27 ಕಂಬಳ ವೇಳಾಪಟ್ಟಿ ಪ್ರಕಟ : ಅಕ್ಟೋಬರ್‌ನಲ್ಲಿ ಮೈಸೂರಿನಲ್ಲಿ ಐತಿಹಾಸಿಕ ಕಂಬಳ









