ವಿಟ್ಲ: ಅಡ್ಯನಡ್ಕ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಮೊಬೈಲ್ ಮೂಲಕ ಮಟ್ಕಾ ಜೂಜಾಟ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸರು ದಿಢೀರ್ ಕಾರ್ಯಾಚರಣೆ ನಡೆಸಿ ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯ ವೇಳೆ ಆರೋಪಿಯು ಸ್ಥಳದಿಂದ ತಪ್ಪಿಸಿಕೊಳ್ಳಲು ಯತ್ನಿಸಿದರೂ ಪೊಲೀಸರು ಆತನನ್ನು ಹಿಡಿಯುವಲ್ಲಿ ಯಶಸ್ವಿಯಾದರು.
ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಬಿ. ಎಸ್. ನಾಯಕ್ (ತನಿಖೆ–2) ಅವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿಯು ಮೊಬೈಲ್ ಮೂಲಕ ಮಟ್ಕಾ ಜೂಜಾಟ ನಡೆಸುತ್ತಿರುವುದನ್ನು ಒಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಆರೋಪಿಯ ಬಳಿಯಿದ್ದ ಮೊಬೈಲ್ ಫೋನ್ ಹಾಗೂ ಮಟ್ಕಾ ಚಟುವಟಿಕೆಯಿಂದ ಸಂಗ್ರಹಿಸಲಾಗಿದೆ ಎನ್ನಲಾದ ₹750 ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ತನಿಖೆ ವೇಳೆ ಅಶೋಕ್ ಕೇಪು ಎಂಬಾತ ಈ ಕೃತ್ಯಕ್ಕೆ ಸಹಕಾರ ನೀಡಿರುವ ಮಾಹಿತಿ ಕೂಡ ಬೆಳಕಿಗೆ ಬಂದಿದೆ.
ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಪ್ರಕರಣದ ಕುರಿತು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಮುಂದುವರಿಸಿದ್ದಾರೆ.










2 thoughts on “ವಿಟ್ಲದಲ್ಲಿ ಮಟ್ಕಾ ಜೂಜಾಟಕ್ಕೆ ಪೊಲೀಸರ ಬ್ರೇಕ್ : ದಾಳಿಯಲ್ಲಿ ಓರ್ವ ವಶ, ಮೊಬೈಲ್ ಮತ್ತು ನಗದು ಜಪ್ತಿ”