---Advertisement---

ವಯನಾಡು ಭೂಕುಸಿತ ದುರಂತ : ಮತ್ತೆ ಮೂರು ಮೃತದೇಹಗಳು ಪತ್ತೆ; ಸಾವಿನ ಸಂಖ್ಯೆ 6ಕ್ಕೆ ಏರಿಕೆ

drusti news logo
On: July 9, 2026
ವಯನಾಡು ಭೂಕುಸಿತ ದುರಂತ ಸ್ಥಳದಲ್ಲಿ ರಕ್ಷಣಾ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿರುವ ದೃಶ್ಯ
---Advertisement---

ವಯನಾಡು: ಕೇರಳದ ವಯನಾಡು ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಭೂಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಆರುಕ್ಕೆ ಏರಿಕೆಯಾಗಿದೆ. ಗುರುವಾರ (ಜು. 9) ನಡೆದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯ ವೇಳೆ ಇನ್ನೂ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಅಧಿಕಾರಿಗಳು ಈ ಮಾಹಿತಿಯನ್ನು ದೃಢಪಡಿಸಿದ್ದಾರೆ.

ಎನ್‌ಡಿಆರ್‌ಎಫ್, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಪೊಲೀಸ್ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ಮುಂದುವರಿಸಿದ್ದು, ಕಲ್ಲು-ಮಣ್ಣಿನ ಅವಶೇಷಗಳಡಿ ಹಾಗೂ ಸಮೀಪದಲ್ಲಿ ಹರಿಯುತ್ತಿರುವ ನದಿಯಲ್ಲಿ ಶೋಧ ನಡೆಸುವ ವೇಳೆ ಮೂರು ಮೃತದೇಹಗಳು ಪತ್ತೆಯಾಗಿವೆ. ಇದರೊಂದಿಗೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಆರುಕ್ಕೆ ತಲುಪಿದೆ.

ಮೃತರನ್ನು ಉತ್ತರ ಪ್ರದೇಶದ ಸರ್ವೇಯರ್ ಅಜಹರುದ್ದೀನ್ ಅನ್ಸಾರಿ, ಹಿಮಾಚಲ ಪ್ರದೇಶದ ಎಂಜಿನಿಯರ್ ರಾಹುಲ್ ಶರ್ಮಾ ಹಾಗೂ ಬಿಹಾರದ ಹಿಟಾಚಿ ಆಪರೇಟರ್ ಮೊಹಮ್ಮದ್ ಇಮ್ರಾನ್ ಅನ್ಸಾರಿ ಎಂದು ಗುರುತಿಸಲಾಗಿದೆ.

ಇನ್ನೂ ಇಬ್ಬರು ಕಾರ್ಮಿಕರು ನಾಪತ್ತೆಯಾಗಿದ್ದು, ಅವರನ್ನು ಪತ್ತೆಹಚ್ಚಲು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಕಾರ್ಯಾಚರಣೆಯನ್ನು ನಾಲ್ಕು ವಲಯಗಳಾಗಿ ವಿಭಜಿಸಿ ಎನ್‌ಡಿಆರ್‌ಎಫ್, ಅಗ್ನಿಶಾಮಕ ದಳ ಮತ್ತು ಸ್ಥಳೀಯ ಪೊಲೀಸರು ನಿರಂತರ ಶೋಧ ನಡೆಸುತ್ತಿದ್ದಾರೆ.

ದುರಂತದಲ್ಲಿ ಗಾಯಗೊಂಡಿದ್ದ 10 ಕಾರ್ಮಿಕರಲ್ಲಿ ಮೂವರು ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ ಇಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಯನಾಡು ಮತ್ತು ಕೋ ಝಿಕ್ಕೋ ಡ್ ಜಿಲ್ಲೆಗಳನ್ನು ಸಂಪರ್ಕಿಸುವ ಆನೆಕ್ಕಂಪೊಯಿಲ್–ಮೇಪ್ಪಾಡಿ ಸುರಂಗ ಮಾರ್ಗ ಯೋಜನೆ ಪ್ರದೇಶದಲ್ಲಿ ಜುಲೈ 7ರಂದು ಈ ಭೂಕುಸಿತ ಸಂಭವಿಸಿತ್ತು. ಅಂದಿನಿಂದ ನಿರಂತರವಾಗಿ ರಕ್ಷಣಾ ಹಾಗೂ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾದವರಿಗಾಗಿ ಸಿಬ್ಬಂದಿ ಶ್ರಮಿಸುತ್ತಿದ್ದಾರೆ.


ಮತ್ತಷ್ಟು ಓದಿ

ಮಂಗಳೂರು ಚಾಲಿ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ₹5 ಹೆಚ್ಚಳ; ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ

drusti news logo

drustinews

Drusti News delivers timely, accurate, and reliable Kannada news covering local, state, national, and global events

Join WhatsApp

Join Now

Join Instagram

Join Now

ಇದನ್ನು ಓದಿ

ಉಡುಪಿಯಲ್ಲಿ ಎಂ.ಡಿ.ಎಂ.ಎ ಮತ್ತು ಹೈಡ್ರೋ ಗಾಂಜಾ ವಶಪಡಿಸಿಕೊಂಡು ಮೂವರನ್ನು ಬಂಧಿಸಿದ ಪೊಲೀಸ್ ಕಾರ್ಯಾಚರಣೆ

ಉಡುಪಿಯಲ್ಲಿ ಮಾದಕವಸ್ತು ಜಾಲಕ್ಕೆ ಪೊಲೀಸರ ದೊಡ್ಡ ಹೊಡೆತ: ಎಂ.ಡಿ.ಎಂ.ಎ, ಹೈಡ್ರೋ ಗಾಂಜಾ ಸಹಿತ ಮೂವರು ಬಂಧನ

ಭಾರತದ ಸಮುದ್ರಾಹಾರ ರಫ್ತು ಹೊಸ ದಾಖಲೆ ನಿರ್ಮಿಸಿ ₹73,890 ಕೋಟಿ ಆದಾಯ ಗಳಿಸಿದ ಮೀನುಗಾರಿಕೆ ಕ್ಷೇತ್ರ

ಭಾರತದ ಸಮುದ್ರಾಹಾರ ರಫ್ತಿಗೆ ಹೊಸ ದಾಖಲೆ : ₹73,890 ಕೋಟಿ ಆದಾಯ, 75ಕ್ಕೂ ಹೆಚ್ಚು ದೇಶಗಳಿಗೆ 19.72 ಲಕ್ಷ ಮೆಟ್ರಿಕ್ ಟನ್ ರಫ್ತು

Airtel 5G ಅನ್‌ಲಿಮಿಟೆಡ್ ಡೇಟಾ ಹಾಟ್‌ಸ್ಪಾಟ್ ಬಳಕೆಯ ಹೊಸ ನಿರ್ಬಂಧದ ಕುರಿತು ಚರ್ಚೆ

Airtel 5G ಬಳಕೆದಾರರಿಗೆ ಶಾಕ್? ಅನ್‌ಲಿಮಿಟೆಡ್ 5G ಡೇಟಾದ ಹಾಟ್‌ಸ್ಪಾಟ್ ಬಳಕೆಗೆ ಹೊಸ ನಿರ್ಬಂಧದ ಚರ್ಚೆ

ಕರ್ನಾಟಕದಲ್ಲಿ ಮತ್ತೆ ಚುರುಕಾದ ಮುಂಗಾರು ಮಳೆ

ಕರ್ನಾಟಕದಲ್ಲಿ ಮತ್ತೆ ಚುರುಕುಗೊಂಡ ಮುಂಗಾರು : ಮುಂದಿನ 7 ದಿನ ರಾಜ್ಯಾದ್ಯಂತ ಮಳೆ ಸಾಧ್ಯತೆ, ಕರಾವಳಿ-ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಕರಾವಳಿಯಲ್ಲಿ ನಾಡದೋಣಿ ಮೀನುಗಾರಿಕೆ ಆರಂಭವಾಗದೆ ಸಮುದ್ರ ತೀರದಲ್ಲಿ ಕಾಯುತ್ತಿರುವ ಮೀನುಗಾರರು

ಕರಾವಳಿಯಲ್ಲಿ ಇನ್ನೂ ಆರಂಭವಾಗದ ನಾಡದೋಣಿ ಮೀನುಗಾರಿಕೆ; ಬದುಕಿನ ಭರವಸೆಯಾದ ‘ಕೈರಂಪಣಿ’ಗಾಗಿ ಕಾಯುತ್ತಿರುವ ಮೀನುಗಾರರು

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಕಡ್ಡಾಯ ಸಿಸಿಟಿವಿ ಅಳವಡಿಕೆ

ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಕಡ್ಡಾಯ ಸಿಸಿಟಿವಿ; ಭದ್ರತೆಗಾಗಿ ಸರ್ಕಾರದ ಮಹತ್ವದ ನಿರ್ಧಾರ

1 thought on “ವಯನಾಡು ಭೂಕುಸಿತ ದುರಂತ : ಮತ್ತೆ ಮೂರು ಮೃತದೇಹಗಳು ಪತ್ತೆ; ಸಾವಿನ ಸಂಖ್ಯೆ 6ಕ್ಕೆ ಏರಿಕೆ”

Leave a Comment